ನ್ಯಾಯಯುತವಾಗಿ ಜನರಿಗೆ ಸವಲತ್ತುಗಳನ್ನು ದೊರಕಿಸಲು ಸೂಚನೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ನ್ಯಾಯಯುತವಾಗಿ ಜನರಿಗೆ ಸವಲತ್ತುಗಳನ್ನು ದೊರಕಿಸಲು ಸೂಚನೆ

ಹಾಸನ ಮೇ.8(ಕರ್ನಾಟಕ ವಾರ್ತೆ): ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ನ್ಯಾಯಯುತವಾಗಿ ಜನರಿಗೆ ಸವಲತ್ತುಗಳನ್ನು ದೊರಕಿಸಲು ಮುತುವರ್ಜಿವಹಿಸುವಂತೆ ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಎಂ.ರಾಮಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ನಿಗಮದಿಂದ ಅನುಷ್ಟಾನವಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಬೋವಿ ಅಭಿವೃದ್ಧಿ ನಿಗಮದಿಂದ ದೊರಕುವ ಸವಲತ್ತುಗಳ ಬಗ್ಗೆ ಹೆಚ್ಚಿನ ಪ್ರಚಾರ ಆಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾಳಜಿವಹಿಸಲು ಸೂಚಿಸಿದರು.
ಸರ್ಕಾರದ ಅನುದಾನ ವಾಪಸ್ ಹೋಗದಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸಾಲ ಸೌಲಭ್ಯ ಒದಗಿಸಲು ಲೀಡ್ ಬ್ಯಾಂಕ್ ಅಧಿಕಾರಿಗಳು ಫಲಾನುಭವಿಗಳಿಂದ ಸಿಬಿಲ್ ಹಾಗೂ ಸೆಕ್ಯುರಿಟಿ ಕೇಳಬಾರದು ಎಂದು ನಿರ್ದೇಶನ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಕ್ರಮವಹಿಸುವಂತೆ ಹಾಗೂ ಉದ್ಯಮ ಶೀಲತಾ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರ್ಥಿಕ ಅಭಿವೃದ್ದಿಗೆ ಸಹಕರಿಸುವಂತೆÀ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾಲಂಭಿ ಸಾರಥಿ ಯೋಜನೆಯಡಿ ಫಾಸ್ಟ್ ಫುಡ್ ಹಾಗೂ ಟ್ರಕ್ ಟ್ರೆöÊಲರ್, ಮೊಬೈಲ್ ಕಿಚನ್‌ಗೆ ಸಹಾಯಧನವನ್ನು ಒದಗಿಸಲು ಕ್ರಮವಹಿಸುವಂತೆ ಆಧಿಕಾರಿಗಳಿಗೆ ನಿದೇಶನ ನೀಡಿದರು.
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಚಂದ್ರ ನಾಯಕ್ ಅವರು ಮಾತನಾಡಿ ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಸಮುದಾಯದವರಿಗೆ ಮಾಹಿತಿ ನೀಡುವುದರ ಜೊತೆಗೆ ಸವಲತ್ತುಗಳ ಬಳಕೆಗೆ ಪ್ರೇರೆಪಣೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಕ್ರೋ ಕ್ರೆಡಿಟ್ ಯೋಜನೆಯಡಿ ಒಮ್ಮೆ ಸಾಲ ಪಡೆದು ತೀರುವಳಿ ಮಾಡಿದರೆ ಪುನಃ ಐದು ಲಕ್ಷ ಸಾಲ ನೀಡಲಾಗುವುದು ಈ ಸವಲತ್ತು ಬಳಸಿಕೊಂಡು ಆರ್ಥಿಕ ಸ್ಥಿತಿಯನ್ನು ವೃದ್ದಿಗೊಳಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಅಡಿಷನಲ್ ಲಿಸ್ಟ್ ತಯಾರಿ ಮಾಡಿಕೊಳ್ಳಿ ಅರ್ಹರಿಗೆ ಅವಕಾಶ ಕಲ್ಪಿಸಲು ತಿಳಿಸಿದರು. ಈ ಸಮುದಾಯದ ಜನರಿಗೆ ಸರ್ಕಾರದ ಸವಲತ್ತುಗಳು ತಲುಪಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಸರ್ಕಾರ ದ ಅನುದಾನ ವಾಪಸ್ ಹೋದರೆ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ಬೋವಿ ಕಾಲೋನಿಗಳಲ್ಲಿ ಅರಿವು ಮೂಡಿಸಿ ನಿಗಮದ ಯೋಜನೆಗಳ ಪ್ರಯೋಜನ ಪಡೆಯಲು ಜಾಗೃತಿ ಮೂಡಿಸಲು ನಿರ್ದೇಶನ ನೀಡಿದರು.
ಬೋವಿ ಸಮಾಜದ ಎಲ್ಲಾ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗಳಿಗೆ ದಾಖಲು ಮಾಡಲು ಕ್ರಮವಹಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಬೋವಿ ಸಮಾಜದ ಮಕ್ಕಳಿಗೆ ಹಾಸ್ಟೆಲ್‌ಗಳಲ್ಲಿ ಪ್ರವೇಶ ಕಲ್ಪಿಸಿ ಎಂದರಲ್ಲದೆ, ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *