ಅರಸಿಕೆರೆಯಲ್ಲಿ ಶನಿವಾರ ನಡೆಯಲಿರುವ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಭಾವಸಾರ ಕ್ಷತ್ರಿಯ ಸಮಾಜದ ಕಾರ್ಯದರ್ಶಿಗಳಾದ ಕೆ ಹೇಮಂತ್ ಮಾತನಾಡಿ ಅರಸೀಕೆರೆ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ಸ್ವಾಮಿ ಸಮುದಾಯ ಭವನ ನಿರ್ಮಾಣ ಮಾಡುವಲ್ಲಿ ಅತಿ ಹೆಚ್ಚು ಸಹಕಾರ ನೀಡಿ ಸರ್ಕಾರದ ಅನುದಾನ ಕೊಡಿಸುವಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆಎಂ ಶಿವಲಿಂಗೇಗೌಡರು ಅತಿ ಹೆಚ್ಚು ಶ್ರಮವಹಿಸಿದ್ದಾರೆ ಮತ್ತು ನಗರಸಭೆಯ ಅಧ್ಯಕ್ಷರಾದ ಎಂ ಸಮೀವುಲ್ಲಾ ರವರು ಪ್ರತಿ ಹಂತದಲ್ಲೂ ಸಹ ಹೆಚ್ಚಿನ ಸಹಕಾರ ನೀಡಿದ್ದು ನಮ್ಮ ಅರಸಿಕೆರೆ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಶುಭ ಹಾರೈಸಲಿದ್ದು ಈ ಸಮಾರಂಭದಲ್ಲಿ ನಮ್ಮ ಸಮಾಜದ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸಲಿದ್ದೇವೆ ಎಂದು ಎಂದು ಕೆ ಹೇಮಂತ ತಿಳಿಸಿದರು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ನರೇಶ್ ನಾಜರೇ. ಕರ್ನಾಟಕ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ರಾವ್. ರಾಜೇಶ್ ಶೆಂಡಿಗೆ. ವಾವಳೆ ಮಂಜುನಾಥ್. ಪೆಟ್ಕರ್ ಯೋಗೇಶ್. ಉಪಸ್ಥಿತರಿದ್ದರು.