


ಅರಸೀಕೆರೆ ನಗರದ ಹೊರವಲಯದಲ್ಲಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕಸ್ತೂರಬಾ ಶಿಬಿರದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯಿತಿ ಹಾಸನ ತಾಲೂಕು ಪಂಚಾಯಿತಿ ಅರಸೀಕೆರೆ ಶಾಲಾ ಶಿಕ್ಷಣ ಇಲಾಖೆ ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಅರಸೀಕೆರೆ ತಾಲೂಕು ನಾಗರಿಕರು ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಾಲಾಗಿದ್ದ ಭಾರತರತ್ನ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮವನ್ನು ಹಾಗೂ ನೆರೆದಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿ ಮಾತನಾಡಿ ವಯೋನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಮಾಡಿ ನಮ್ಮ ಜೀವನದಲ್ಲಿ ಗುರುವಿನ ಪಾತ್ರ ಹಾಗೂಗುರುವಿನ ಮೌಲ್ಯವನ್ನು ಸವಿಸ್ತಾರವಾಗಿ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಅರಸೀಕೆರೆ ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತಾಲೂಕು ಯೋಗೀಶ್, ಗ್ಯಾರಂಟಿ ಸಮಿತಿಯ ಅರಸೀಕೆರೆ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಕೆ ಟಿ ಜಯಣ್ಣ, ಸಹ್ಯಾದ್ರಿ ದೇವರಾಜ್, ಮಾಡಾಳು ಸ್ವಾಮಿ, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.