ಅರಸೀಕೆರೆ ವಿಶೇಷ ಸಮಗ್ರ ಪರಿಷ್ಕರಣೆಗೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ವಿಶೇಷ ಸಮಗ್ರ ಪರಿಷ್ಕರಣೆಗೆ  ಕಾಂಗ್ರೆಸ್ ಮುಖಂಡ ಬಾಬು ಮನೆ ಮನೆಗೆ ಭೇಟಿ

ಅರಸೀಕೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹಾಗೂ ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ನಗರದ ವಾರ್ಡ್ ಸಂಖ್ಯೆ 5ರ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಒ.) ಹಾಗೂ ಕಾಂಗ್ರೆಸ್ ಮುಖಂಡ ಬಾಬು ಮನೆಮನೆಗೆ ಭೇಟಿ ನೀಡಿ ಮತದಾರರಿಂದ ಅರ್ಜಿಗಳನ್ನು ಭರ್ತಿ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಬಾಬು, ” ಜುಲೈ ತಿಂಗಳ 1ರಿಂದ 29 ರ ವರೆಗೆ ಒಂದು ತಿಂಗಳ ಕಾಲ ನಡೆಯಲಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪರಿಷ್ಕರಿಸುತ್ತಿದ್ದಾರೆ. ಸಾರ್ವಜನಿಕರು ಅಧಿಕಾರಿಗಳು ನೀಡುವ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ಮಾಹಿತಿಯನ್ನು ಒದಗಿಸುವ ಮೂಲಕ ಈ ಮಹತ್ವದ ಕಾರ್ಯಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಅರ್ಜಿಯಲ್ಲಿ ಕೇಳಿರುವ ಮಾಹಿತಿಗಳು ಸರಳವಾಗಿದ್ದು, ಮನೆಯಲ್ಲಿರುವ ಒಬ್ಬ ಸದಸ್ಯರು ಕುಟುಂಬದ ಇತರ ಸದಸ್ಯರ ಪರವಾಗಿಯೂ ಅಗತ್ಯ ಮಾಹಿತಿಯನ್ನು ನೀಡಬಹುದಾಗಿದೆ. ಕುಟುಂಬದ ಸದಸ್ಯರು ಸ್ಥಳದಲ್ಲಿರದಿದ್ದರೂ ಅವರ ವಿವರಗಳನ್ನು ಒದಗಿಸುವ ಮೂಲಕ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸಬಹುದಾಗಿದೆ ಎಂದು ಅವರು ತಿಳಿಸಿದರು.

ವರದಿ: ಎಂ.ಡಿ. ನಾಸೀರ್ ಅರಸೀಕೆರೆ

Share This Article
Leave a Comment

Leave a Reply

Your email address will not be published. Required fields are marked *