ಆಲೂಗಡ್ಡೆ ಬೆಳೆ ಬೆಳೆಯಲು ರೈತರಿಗೆ ಉತ್ತೇಜನ ನೀಡಿ-ಶ್ರೇಯಸ್ ಎಂ ಪಟೇಲ್

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!


ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಯನ್ನು ಬೆಳೆಯಲು ರೈತರಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಯ ಹಳೇಯ ವೈಭವ ಮರುಕಳಿಸುವಂತೆ ಮಾಡಬೇಕು ಎಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ದಿಶಾ (ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ) ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಒದಗಿಸುವುದರ ಜೊತೆಗೆ ಬೆಳೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಲು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜವನ್ನು ಒದಗಿಸುವಂತೆ ಸೂಚನೆ ನೀಡಿದರಲ್ಲದೆ, ರಸಗೊಬ್ಬರಗಳ ಮಿತ ಬಳಕೆಗೆ ಒತ್ತು ನೀಡಲು ಕೃಷಿಕರಲ್ಲಿ ಜಾಗೃತಿ ಮೂಡಿಸಲು ತಿಳಿಸಿದರು.

ರೈಲ್ವೆ ಯೋಜನೆಗಳ ಕುರಿತು ಕಡ್ಡಾಯವಾಗಿ ಪ್ರತಿ ತಿಂಗಳು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ರೈಲ್ವೆ ಗೇಟ್ ಗಳನ್ನು ಹೆಚ್ಚಿನ ಸಮಯ ಹಾಕುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ಅಗತ್ಯವಿರುವ ಕಡೆ ಅಂಡರ್ ಪಾಸ್ ನಿರ್ಮಾಣಕ್ಕೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಹೊಳೆನರಸೀಪುರದಲ್ಲಿ ಬೆಳೆಯುವ ರಾಜಮುಡಿ ಭತ್ತ ಮತ್ತು ಅರಸೀಕೆರೆ ತಾಲ್ಲೂಕಿನ ತೆಂಗು ಬೆಳೆಗೆ ಜಿಯೋ ಟ್ಯಾಗ್ ದೊರೆಕುವ ನಿಟ್ಟಿನಲ್ಲಿ ದಾಖಲೆಗಳನ್ನು ಒದಗಿಸುವ ಮೂಲಕ ಪ್ರಯತ್ನಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೆಂಗಿನ ಬೆಳೆಯ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ರೈತರಿಗೆ ತೆಂಗಿನ ಸಸಿಗಳನ್ನು ಒದಗಿಸುವಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಸಹಾಯಕಿಯರು ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯ ವಸತಿ ಗೃಹದಲ್ಲಿ ವಾಸವಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಪರಿಣಾಮವಾಗಿ ಕೆಲಸ ನಿರ್ವಹಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯ ಶಾಲಾ ಕೊಠಡಿಗಳ ದುರಸ್ಥಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಶುಪಾಲನಾ ಇಲಾಖೆಯ ಮೊಬೈಲ್ ವ್ಯಾನ್ ಗಳು ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ದೂರು ಕೇಳಿಬರುತ್ತಿವೆ. ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲೆಯು ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನ ಪಡೆಯಲು ಪ್ರಾರಂಭದಿAದಲೆ ಹೆಚ್ಚಿನ ಶ್ರಮವಹಿಸಿ ನ್ಯೂನ್ಯತೆಗಳನ್ನು ಗುರುತಿಸಿ ಸರಿಪಡಿಸುವ ಮೂಲಕ ಮಕ್ಕಳ ಪರೀಕ್ಷೆ ಎದುರಿಸಲು ತಯಾರು ಮಾಡಲು ನಿಗಾವಹಿಸಿ ಎಂದು ತಿಳಿಸಿದರು.

ಬಿ.ಸಿ.ಎಂ.ಹಾಸ್ಟೇಲ್ ಗಳಲ್ಲಿ ಅವ್ಯವಸ್ಥೆಗಳ ಬಗ್ಗೆ ಕೇಳಿ ಬರುತ್ತಿವೆ ಮಕ್ಕಳು ದಾರಿತಪ್ಪಿ ದ್ದಾರೆ ಎಂದು ಕೇಳಿ ಬರುತ್ತಿವೆ. ಮಕ್ಕಳ ಜೀವನ ಬಹುಮುಖ್ಯ ಈ ನಿಟ್ಟಿನಲ್ಲಿ ವಾರ್ಡನ್ ಗಳ ಸಭೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಜವಾಬ್ದಾರಿ ಯಿಂದ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸದೆ ಬಡಜನತೆಗೆ ತೊಂದರೆ ನೀಡುತ್ತಿದ್ದೀರಿ ತುರ್ತಾಗಿ ಕೆಲಸ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.ಒಂದು ವಾಟ್ಸ್ ಆ್ಯಪ್ ಗ್ರೂಪ್ ಮಾಡಿ ಎಲ್ಲೆಲ್ಲಿ ಕೆಲಸ ಪ್ರಾರಂಭವಾಗಿದೆ ಯಾವ ಸ್ಥಿತಿಯಲ್ಲಿದೆ ಎಂಬುದರ ಕುರಿತು ಪೋಟೋ ಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಲೀಡ್ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಒಂದು ಸಮನ್ವಯ ಸಭೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದAತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಏತನೀರಾವರಿಗೆ ಸಂಬAಧಿಸಿದAತೆ ಭೂ ಸ್ವಾಧೀನಕ್ಕೆ ಕ್ರಮ ಹಾಗೂ ಕಾಮಗಾರಿಗಳನ್ನು ಪ್ರಾರಂಭಿಸಲು ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದರೆ ಸರ್ಕಾರದ ಹಂತದಲ್ಲಿ ಡಿ.ಪಿ.ಆರ್.ಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣವನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು. ಗ್ರಾಮೀಣ ಭಾಗದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟವಾಗುತ್ತಿದ್ದು, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ವಿವೇಚನಾ ಕೋಟವನ್ನು ಬದಲಾವಣೆ ಮಾಡದೆ ಬಂದAತಹ ರೀತಿಯಲ್ಲಿ ಅನುಷ್ಟಾನಕ್ಕೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಮಾರ್ಗದಲ್ಲಿ ಸಾರ್ವಜನಿಕರೊಂದಿಗೆ ಚಾಲಕರು ಮತ್ತು ನಿರ್ವಾಹಕರು ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ತಿಳಿಸಿ ಎಂದು ಹೇಳಿದರು.

ವೃದ್ಧಾಪ್ಯ ವೇತನ ಅರ್ಜಿಗಳನ್ನು ಮೊದಲ ಆದ್ಯತೆಯ ಮೇಲೆ ಮಾಡುವಂತೆ ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದರಲ್ಲದೆ, ವಯಸ್ಸಿನ ದೃಢೀಕರಣ ಪತ್ರ ಪಡೆಯಲು ಆಸ್ಪತ್ರೆಗೆ ವಯಸ್ಸಾದವರು ಅಲೆಯದಂತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಖುದ್ದಾಗಿ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗಳಿದ್ದಲಿ ಪರಿಹಾರಕ್ಕೆ ಕ್ರಮವಹಿಸುವಂತೆ ಸೂಚನೆ ನೀಡಲು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಅವರು ಮಾತನಾಡಿ ಜೆ.ಜೆ.ಎಂ. ಯೋಜನೆಯಡಿ ಮನೆ ಮನೆಗೆ ಎಂದು ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ನಿರ್ಮಾಣ ಮಾಡಿರುವ ನೀರಿನ ಟ್ಯಾಂಕ್ ಗೆ ನೀರು ಸರಬರಾಜು ಆಗುತ್ತಿಲ್ಲ ಎಂದರು. ಜಿಲ್ಲೆಯಲ್ಲಿ ಜೆ.ಜೆ.ಎಂ. ಯೋಜನೆ ಕಾಮಗಾರಿ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸಂಸದರ ಅಧ್ಯಕ್ಷತೆಯಲ್ಲಿ ಎಲ್ಲಾ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಸಭೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿಗೆ 24 ಗಂಟೆ ವಿದ್ಯುತ್ ಲೈನ್ ಆನ್ ಇರಬೇಕು ಎಕ್ಸ್ ಪ್ರೆಸ್ ಲೈನ್ ಪ್ರತ್ಯೇಕವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರ ಲ್ಲದೆ,ಯಾವುದೇ ತೊಂದರೆ ಯಾಗದಂತೆ ಕ್ರಮಕೈಗೊಳ್ಳು ವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.\

ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅರಸೀಕೆರೆ ತಾಲ್ಲೂಕಿನ ಬೆಂಡೆಕೆರೆ ಬಳಿಯ ರಸ್ತೆ ಕಾಮಗಾರಿ ಕೆಲಸವನ್ನು ಮಾಡದೆ ಜನರಿಗೆ ತೊಂದರೆ ನೀಡುತ್ತಿದ್ದೀರಿ ತುರ್ತಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಹೈನುಗಾರಿಕೆ ಹಾಗೂ ಗ್ಯಾರಂಟಿ ಯೋಜನೆಗಳು 10 ರಿಂದ 15 ಹಸುಗಳನ್ನು ಸಾಕಿರುವ ಮನೆಗಳಿಗೆ ಆರೋಗ್ಯ ನಿರೀಕ್ಷಕರು ಖುದ್ದು ಭೇಟಿ ನೀಡಿ ರಾಸುಗಳ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿ, ಇದರಿಂದ ರೈತರಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ರಾಗಿ ಖರೀದಿ ಕೇಂದ್ರಗಳಿಗೆ ರೈತರ ಹೆಸರಿನಲ್ಲಿ ವ್ಯಾಪಾರಸ್ತರು ರಾಗಿ ಬಿಡುತ್ತಿದ್ದಾರೆ. ನಿಜವಾದ ರೈತರಿಗೆ ಅನುಕೂಲವಾಗ ಬೇಕು ಆದರೆ ಅದು ಆಗುತ್ತಿಲ್ಲ ಎಂದರು.ಕೃಷಿ ಇಲಾಖೆ ವತಿಯಿಂದ ಮಾಡುವ ಬೆಳೆ ಸಮೀಕ್ಷೆ ಸಂದರ್ಭದಲ್ಲಿ ನೈಜವಾಗಿ ಇರಲಿ ಎಂದು ತಿಳಿಸಿದರು

ಅಂಗನವಾಡಿ ಕಾರ್ಯಕರ್ತೆಯರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಮೊದಲ ಆದ್ಯತೆ ವಿಧವೆಯರಿಗೆ ನೀಡಿ ಜೊತೆಗೆ ಮೇರಿಟ್ ಆಧಾರದಲ್ಲಿ ಆಯ್ಕೆ ಮಾಡುವಂತೆ ತಿಳಿಸಿದರು

ಪಿ.ಡಿ.ಓ ಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಲಭ್ಯವಾಗುವಂತೆ ಇರಬೇಕು ಎಂದು ತಿಳಿಸಿದರು. ಕುಡಿಯುವ ನೀರನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಮಗೆ ನೇರವಾಗಿ ಹಾಗೂ ಪರೋಕ್ಷವಾಗಿ ಸಂಪರ್ಕಕ್ಕೆ ಬರುವವರೆಲ್ಲರಿಗೂ ಸ್ವಯಂ ಗಣತಿಯನ್ನು ಮಾಡಿಸುವಂತೆ ಸೂಚಿಸಿದರು ಸ್ವಯಂ ಗಣತಿಗೆ ಇಂದು ಒಂದೇ ದಿನ ಬಾಕಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಗಣತಿಗೆ ಕ್ರಮವಹಿಸುವಂತೆ ತಿಳಿಸಿದರು.

ಶಾಲಾ ಜಾಗವನ್ನು ಖಾತೆ ಮಾಡಿಸುವುದು ಅತ್ಯಗತ್ಯ ವಾಗಿದ್ದು, ಜಿಲ್ಲೆಯಲ್ಲಿ ಇನ್ನೂ 948 ಶಾಲೆಗಳಿಗೆ ಖಾತೆಯಾ ಗಿಲ್ಲ ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಗಳು ಕ್ರಮವಹಿಸುವಂತೆ ತಿಳಿಸಿದರಲ್ಲದೆ, ಆರ್.ಟಿ.ಸಿ.ಯಲ್ಲಿ ಅಪ್ಡೇಟ್ ಆಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೇಮಾವತಿ, ಯಗಚಿ, ವಾಟೆ ಹೊಳೆಯಲ್ಲಿ ಲಭ್ಯವಿರುವ ನೀರಿನ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಾನುವಾರುಗಳಿಗೆ ಬೆಸಿಗೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಬೇಕು ಎಂದು ತಿಳಿಸಿದರು.

17 ವಾರಗಳಿಗೆ ಮೇವು ಲಭ್ಯವಿದೆ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಾನುವಾರುಗಳಿಗೆ ಲಸಿಕೆ ತಪ್ಪದಂತೆ ಹಾಕಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕುಗಳಲ್ಲಿ ಅಕ್ಷರ ದಾಸೋಹ ಕುರಿತಂತೆ ಏನಾದರೂ ಸಮಸ್ಯೆಗಳು ಇದೆಯೇ ಎಂದು ಪರಿಶೀಲಿಸಲು ತಹಸೀಲ್ದಾರ್ ಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಕೊಳಗೇರಿಗಳಲ್ಲಿ ಇರುವ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಒಂದು ಸಭೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಅಪೂರ್ಣ ಗೊಂಡಿರುವ ಕೆಲಸಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ದಿಶಾ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾದ ತಾರಾ ಚಂದನ್ , ಮಂಜುಳಾ ಬಾಯಿ, ಎಲ್.ಡಿ.ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
**********-

Share This Article
Leave a Comment

Leave a Reply

Your email address will not be published. Required fields are marked *