ಉಡುಪಿ ಬೈಲೂರಿನ ವಾಸುದೇವ ಕೃಪಾ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಇಪ್ಪತ್ತನೆಯ ವಾರ್ಷಿಕೋತ್ಸವ ಸಂಭ್ರಮದಿಂದ ನೆರವೇರಿತು. ಸಭಾಧ್ಯಕ್ಷರಾಗಿ ಶಾಲಾ ಸಂಚಾಲಕರಾದ ಶ್ರೀ ಕೆ. ಅಣ್ಣಪ್ಪ ಶೆಣೈ, ಮುಖ್ಯ ಅತಿಥಿಗಳಾಗಿ ಡಾ. ಕೆ. ಶ್ರೀಧರ್ ಆರ್. ಪೈ, ಹಳೆ ವಿದ್ಯಾರ್ಥಿಗಳಾದ ಹಿತಾಶ್ರೀ, ರಂಜನ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೋಟ್ಯಾನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿಶಾ, ಶಾಲಾ ನಾಯಕ ಗಗನ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಕಲ್ಯಾಣಿ ಯು ಪೈ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ಪ್ರದರ್ಶನೊಂಡಿತು.







