ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಹಾಸನ  ಗೃಹ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳನ್ನು ವಿತರಣೆ ಮಾಡುವ ಏಜೆನ್ಸಿಗಳು ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಉದ್ಬವಿಸದಂತೆ ಎಚ್ಚರಿಕೆವಹಿಸಿ ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಾತನಾಡಿದ ವಾಣಿಜ್ಯ/ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ವಿತರಕರು ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಮಾಡುಂತೆ ಸೂಚಿಸಿದರು.

ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗೆ ಬುಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದAತೆ ನಿಗಧಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರಲ್ಲದೆ ದುರ್ಬಳಕೆ ಕಂಡು ಬಂದ್ದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು,

ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯ, ಎಷ್ಟು ಗ್ಯಾಪ್ ಇದೆ ಎಂಬುದರ ಮಾಹಿತಿಯನ್ನು ಪ್ರತಿದಿನದ ಮಾಹಿತಿ ಒದಗಿಸುವಂತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಅರುಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೊಟೇಲ್ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *