ಸಂತೋಷ್ ಚಿಕ್ಕನಾಯಕನಹಳ್ಳಿ


ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ದೊಡ್ಡರಾಂಪುರ ಶ್ರೀ ಮಾರಮ್ಮ ದೇವಿಯವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನ ತಾಲ್ಲೂಕು ದಂಡಾಧಿಕಾರಿಗಳು, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಪ್ರತಿನಿಧಿಗಳು, ದೊಡ್ಡ ರಾಂಪುರ ಗ್ರಾಮಸ್ಥರ ಜೊತೆ ಸೇರಿ ಜಾತ್ರಾ ಕಾರ್ಯಕ್ರಮದ ಬಗ್ಗೆ ಮಾತುಕತೆ ನಡೆಸಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಬಸ್ ಮತ್ತು ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳಬೇಕು ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿ ದಿನಾಂಕ 16 ಮತ್ತು 17 ರಂದು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು.







