ತೆಂಗಿನ ಎಣ್ಣೆ ಸಂಜೀವಿನಿಯಂತೆ ಕೆಲಸ ಮಾಡುತ್ತದೆ ಭಾಗ್ಯ ಬಿ ಕೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!



ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅರಸೀಕೆರೆ ವತಿಯಿಂದ ಚಿಕ್ಕೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಚಿಕ್ಕೂರು ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಭಾಗ್ಯ ಬಿ ಕೆ ಅವರು ಆಹಾರವೇ ಆರೋಗ್ಯದ ಹೆಬ್ಬಾಗಿಲು ಎಂಬ ವಿಷಯವನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು ಈ ಸಂದರ್ಭದಲ್ಲಿ ತೆಂಗಿನ ಎಣ್ಣೆ ಸಂಜೀವಿನಿಯಂತೆ ಕೆಲಸ ಮಾಡುತ್ತದೆ ತೆಂಗಿನ ಎಣ್ಣೆಯನ್ನು ಅಡಿಗೆ ಎಣ್ಣೆಯಾಗಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಕಲ್ಪತರು ನಾಡಿನ ಜನಗಳು ತೆಂಗಿನ ಮಹತ್ವವನ್ನು ಅರಿತುಕೊಂಡು ತೆಂಗಿನ ಎಣ್ಣೆಯನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ರೈತರಿಗೂ ಸಹಕಾರಿಯಾಗಲದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಜನಪದ ಪರಿಷತ್ತಿನ ಅಧ್ಯಕ್ಷರಾದ ಪರಮೇಶ್ ಬಿ ಅವರು ಸಾಮಾಜಿಕ ಆರೋಗ್ಯ ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯ ಈ ಮೂರು ರೀತಿಯ ಆರೋಗ್ಯ ಬಹಳ ಮುಖ್ಯ ಈ ರೀತಿಯ ಆರೋಗ್ಯವನ್ನು ಜನಪದ ಆಹಾರ ಜನಪದ ಆಟಗಳು ಜನಪದ ಗೀತೆಗಳಿಂದ ಸಾಧಿಸಬಹುದಾಗಿದೆ ನಮ್ಮ ಆಹಾರ ಹಿತಕರವಾಗಿರಬೇಕು ಮತ್ತು ಮಿತಕರವಾಗಿರಬೇಕು ಹಾಗೂ ಋತುಮಾನಗಳಿಗೆ ಅನುಗುಣವಾಗಿ ಇರಬೇಕು ಹಾಗಿದ್ದಾಗ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂಬ ಸಂದೇಶವನ್ನು ಸಾರಿದರು.  ಜೊತೆಗೆ ಸಾಂಪ್ರದಾಯಿಕ ಕೃಷಿಯ ಮಹತ್ವವನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಹಾಜರಿದ್ದ ಜನಪದ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಯೋಗೀಶ್ ದಿಬ್ಬೂರು ಅವರು ಜನಪದ ಹಾಡುಗಳನ್ನ ಹಾಡುವ ಮೂಲಕ ಶಿಭಿರಾರ್ತಿ ಗಳಿಗೆ ಹಾಗೂ ಗ್ರಾಮಸ್ಥರಿಗೆ ಜನಪದ ಹಾಡುಗಳ ಸವಿ ಉಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಚಿತ್ರಕಲಾ ಅವರು ಎನ್ ಎಸ್ ಎಸ್ ಮಹತ್ವವನ್ನು ಕುರಿತು ಶಿಬಿರಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಶಿವರಾಧಿಕಾರಿಗಳಾದ ಕುಮಾರ್ ಅವರು ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಗ್ರಾಮಗಳೊಂದಿಗೆ ಶಾಲಾ-ಕಾಲೇಜುಗಳು ಅವಿನಾಭಾವ ಸಂಬಂಧವನ್ನು ಹೊಂದಿದಾಗ ಪರಿಣಾಮಕಾರಿಯಾದ ಬದಲಾವಣೆಯೊಂದಿಗೆ ದೇಶದ ಉನ್ನತಿ ಸಾಧ್ಯ ಆ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಸಹ ಶಿಬಿರ ಅಧಿಕಾರಿಗಳಾದ ಡಾ. ಹರೀಶ್ ಕುಮಾರ್ ಅವರು ರಾಷ್ಟ್ರೀ ರಾಷ್ಟ್ರೀಯ ಸೇವಾ ಯೋಜನೆಯು ಗಾಂಧೀಜಿಯವರ ಕನಸಿನ ಕೂಸಾಗಿದೆ ಎಂದು ಹೇಳಿದರು. ಗ್ರಾಮದ ಮುಖಂಡರಾದ ಹಾಲಪ್ಪ ರೇಣುಕಮೂರ್ತಿ ಮಂಜುನಾಥ್ ಹುಚ್ಚೇಗೌಡರು ಸೇರಿದಂತೆ ಹಲವಾರು ಮುಖಂಡರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾಲೇಜಿನ ಎಲ್ಲಾ ಶಿಭಿರಾರ್ಥಿಗಳು ಹಾಗೂ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಚಟುವಟಿಕೆಗಳನ್ನ ವಿದ್ಯಾರ್ಥಿಗಳು ನಡೆಸಿಕೊಟ್ಟು ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *