ನಮ್ಮ ನೆಡೆ ಉತ್ತಮ ಪರಿಸರದ ಕಡೆಗೆ: ಜಿಲ್ಲಾಧಿಕಾರಿ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ನಮ್ಮ ನೆಡೆ ಉತ್ತಮ ಪರಿಸರದ ಕಡೆಗೆ: ಜಿಲ್ಲಾಧಿಕಾರಿ
ಹಾಸನ ಕಲುಷಿತವಾದ ಪರಿಸರವನ್ನು ಸಂರಕ್ಷಣೆ ಮಾಡುವ ನೀಟಿನಲ್ಲಿ ಪರಿಸದ ಕಡೆಗೆ ಸಾಗಿಸೋಣ ಎಂದು ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಕರ್ನಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾ ನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳು ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ವಾಯು ಮಾಲಿನ್ಯವನ್ನು ತಡೆಯಲು ಮತ್ತು ಪರಿಸರವನ್ನು ಉಳಿಸಿ ಬೆಳೆಸಲು ಎಲ್ಲ ರೀತಿಯಿಂದಲೂ ಪ್ರಯತ್ನ ಪಡಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ ಕೆ ಅವರು ಮಾತನಾಡಿ ಜೂನ್ ತಿಂಗಳನಿAದ ಆಗಸ್ಟ್ ತಿಂಗಳವರೆಗೂ ಹಸಿರನ್ನು ಹೆಚ್ಚು ವೃದ್ಧಿ ಗೊಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಮತ್ತು ತಮ್ಮದೇ ಆದ ತಂಡಗಳ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಯಶಸ್ಸು ಕಾಣಲು ಎಲ್ಲರು ಕೈ ಜೋಡಿಸಬೇಕು ಎಂದು ಹೇಳಿದರು.
ಅಪಾರ ಜಿಲ್ಲಾಧಿಕಾರಿ ಜಗದೀಶ್ ಗಂಗಾಣ್ಣನವರ್, ಪರಿಸರ ಅಧಿಕಾರಿ ಭಾಸ್ಕರ್, ರಾಷ್ಟç ಪ್ರಶಸ್ತಿ ಪುರಸ್ಕೃತರಾದ ಬಿ.ಟಿ ಮಾನವ ಹಾಗೂ ಮತ್ತಿತರರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *