ಇಂದು ಬೆಳಗ್ಗೆಯಿಂದ ಅರಸೀಕೆರೆ ನಗರದ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳ ಪಡಿತರ ವಿತರಣೆಯ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರ ಕುಂದು ಕೊರತೆಗಳನ್ನು ಆಲಿಸಿ ಹಾಸನ ಜಿಲ್ಲೆಯ ಆಹಾರ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಭು ಶಂಕರ್ ಅರಸೀಕೆರೆ ತಾಲೂಕು ಆಹಾರ ನಿರೀಕ್ಷಕರಾದ ಶುಭಶ್ರೀ ಅವರೊಂದಿಗೆ ಪಟ್ಟಣದ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ತಪಾಸಣೆ ನಡೆಸಿದರು
ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ಪಡಿತರಣೆ ವಿತರಣೆಯನ್ನು ನಡೆಸಬೇಕು ಸರ್ಕಾರದ ಪಡಿತರ ವಿತರಣೆಗೆ ನಿಗದಿಪಡಿಸಿರುವ ಸಮಯದಲ್ಲಿ ಪಡಿತರ ವಿತರಣೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನಿರ್ದೇಶನ ನೀಡಿದರು