ಪರಿಸರ ಸಂರಕ್ಷಿಸಿ ಭೂಮಿ ಉಳಿಸಿ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಪರಿಸರ ಸಂರಕ್ಷಿಸಿ ಭೂಮಿ ಉಳಿಸಿ
ಹಾಸನ ಜೂ. 05 ಪರಿಸರ ಸಂರಕ್ಷಣೆ ಮಾಡುವ ಮೂಲಕ ಭೂಮಿಯನ್ನು ಉಳಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ 1972 ರಿಂದ ಪರಿಸರ ದಿನವನ್ನು ಪ್ರತಿ ವರ್ಷ ಜೂನ್. 5 ರಂದು ಆಚರಣೆ ಮಾಡುತ್ತಿದ್ದೇವೆ ಎಂದು ಕೌಟುಂಬಿಕ ನ್ಯಾಯಾಲಯದ ಒಂದನೇ ಅಧಿಕ ಪ್ರಧಾನ ನ್ಯಾಯಾಧೀಶರಾದ ಪದ್ಮ ಪ್ರಸಾದ್ ಅವರು ತಿಳಿಸಿದ್ದಾರೆ.
ಹಾಸನಾಂಬ ಕಲಾಕ್ಷೇತ್ರದಲ್ಲಿ ಇಂದು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾ ನಗರ ಪಾಲಿಕೆ, ಹಾಸನ ಮತ್ತು ಕೈಗಾರಿಕೆಗಳು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪರಿಸರದಲ್ಲಿ ಹೆಚ್ಚಾಗುತ್ತಿರುವ ಶಾಖದ ಅಲೆಗಳಿಂದ ಹಿಮಾಲಯದ ಪರ್ವತಗಳು ಕರಗಿ ಹರಿಯುತ್ತಿವೆ ಆದ್ದರಿಂದ ಭೀಕರ ಬಿರುಗಾಳಿ, ಚಂಡಮಾರುತ ಜೀವ ವೈವಿದ್ಯತೆಗಳ ಮೇಲೆಗಳ ಪರಿಣಾಮ ಬೀರುತ್ತಿವೆ ಎಂದು ತಿಳಿಸಿದರು.
ಪ್ರಕೃತಿಯಿಂದ ಪ್ರೇರೇಪಿತರಾಗಿ ಜಗತ್ತನ್ನು ಹವಮಾನದಿಂದ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಮತ್ತು ವಾಯು ಮಾಲಿನ್ಯದಲ್ಲಿ ಆಗುವ ಕಲುಷಿತ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಮತ್ತು ಜವಾಬ್ದಾರಿ ಆಗಿರುತ್ತದೆ ಎಂದು ತಿಳಿಸಿದರು.
ಸ್ವಚ್ಛವಾದ ಪರಿಸರದ ಬಗ್ಗೆ ಭಾಷಣ, ಪ್ರಬಂಧ, ಚಿತ್ರಕಲೆ ಸ್ಪರ್ಧೆ ಮಾಡುವುದಲ್ಲ ಸ್ವಚ್ಛತೆಯನ್ನು ಅನುಸರಿಸುವುದು ಹಾಗೂ ಸ್ವಚ್ಛತೆ ಇದ್ದಲ್ಲಿ ಮಾತ್ರ ಹಸಿರು ಇರಲು ಸಾಧ್ಯ ಎಂದು ತಿಳಿಸಿದರು.
ಪ್ರತಿ ಮನೆಯಲ್ಲಿಯು ಎಲ್ಲರೂ ಒಣ ಕಸ, ಹಸಿ ಕಸ ವಿಂಗಡಣೆ ಮತ್ತು ಪ್ಲಾಸ್ಟಿಕ್ ನಿಯಂತ್ರಣ ಮಾಡಿ ಪರಿಸರಕ್ಕೆ ಪೂರಕವಾದ ಕೆಲಸ ಮಾಡಬೇಕು, ಎಲ್ಲಾ ಇಲಾಖೆಯ ವತಿಯಿಂದ ಈ ವರ್ಷ 7 ರಿಂದ 8 ಲಕ್ಷ ಸಸಿಗಳನ್ನು ಜೂನ್ ತಿಂಗಳಿನಿAದ ಆಗಸ್ಟ್ ತಿಂಗಳ ವರೆಗೆ ನೆಡಲು ಮುಂದಾಗಿರುವುದಾಗಿ ತಿಳಿಸಿದರು.
ಪರಿಸರವನ್ನು ಸ್ವಚ್ಛವಾಗಿ ಇಡಲು ಬೇರೊಬ್ಬರಿಂದ ಹೇಳಿ ತಿಳಿದುಕೊಳ್ಳುವುದಲ್ಲ ನಮ್ಮಿಂದಲೇ ಪರಿಸರವನ್ನು ಸ್ವಚ್ಛವಾಗಿಡಲು ಪ್ರಯತ್ನ ಪಡಬೇಕು ಎಂದು ಹೇಳಿದರು.
ಪರಿಸರ ಅಧಿಕಾರಿ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಬೇಕು ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಮಾಡುವುದು ಎಲ್ಲಾರ ಗುರಿ, ಧ್ಯೇಯ, ಕರ್ತವ್ಯವಾಗಿರಬೇಕು ಮತ್ತು ಪ್ರಕೃತಿಯನ್ನು ಸಂರಕ್ಷಣೆ ಮಾಡುವ ಕಡೆ ಗಮನಹರಿಸಿ, ಮಾಲಿನ್ಯ ಮಾಡುವವರಿಗೆ ದಂಡ ಹಾಗೂ ಪ್ಲಾಸ್ಟಿಕ್ ಬಳಕೆ ಮಾಡುವವರಿಗೆ ದಂಡ ಮತ್ತು ಶಿಕ್ಷೆಯನ್ನು ವಿಧಿಸಲಾಗುವುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಡಿ.ವೈ.ಎಸ್.ಪಿ ಪರಶುರಾಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *