Home ರಾಜ್ಯ ಭಾನುವಾರ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಮೂರು ಒಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಭಾನುವಾರ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಮೂರು ಒಂದೇ ಭಾರತ್ ರೈಲಿಗೆ ಹಸಿರು ನಿಶಾನೆ

26
0

ಪ್ರಧಾನಿ ಶ್ರೀ Narendra Modi ಜಿ ಇದೇ ಭಾನುವಾರ ಕರ್ನಾಟಕ ಪ್ರವಾಸದಂದು ಮೂರು ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು – ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.

ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ಆಗಮಿಸಲಿದೆ. ಹಾಗೂ, ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20 ನಿಮಿಷಕ್ಕೆ ಹೊರಟು ರಾತ್ರಿ 10.40 ನಿಮಿಷಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ‌ ಸಂಪರ್ಕ ಹೆಚ್ಚಿಸಲಿದೆ. ಎಂದು ತಿಳಿದು ಬಂದಿದೆ


LEAVE A REPLY

Please enter your comment!
Please enter your name here