Home ರಾಜಕಾರಣ ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆಹಾಸನ    ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
ಹಾಸನ    ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ 2025-26 ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಪ್ರಾಧಿಕಾರಿಗಳನ್ನಾಗಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅದರಂತೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾರವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ವರ್ಗಾವಣೆಗೆ ಸಂಬAಧಿಸಿದ ನೌಕರರುಗಳು ವರ್ಗಾವಣೆ ಬಯಸಿದ ಸ್ಥಳಗಳಿಗೆ ಕೌನ್ಸಿಲಿಂಗ್ ನಡೆಸಲಾಯಿತು.

ಜು.25 ರಂದು ವಿಶೇಷ ಪ್ರಕರಣಗಳಾದ ಅಂಗವಿಕಲತೆ ಮತ್ತು ದೈಹಿಕ ಅಸಮರ್ಥತಾ ಪ್ರಕರಣಗಳು, ಪತಿ- ಪತ್ನಿ ಪ್ರಕರಣಗಳು ಮತ್ತು 12 ವರ್ಷದೊಳಗಿನ ಮಕ್ಕಳಿರುವ ಒಂಟಿ ಪೋಷಕರು / ಒಂಟಿ ಮಹಿಳೆ / ವಿಕಲಚೇತನ ಮಕ್ಕಳಿರುವ ಪೋಷಕರುಗಳಿಗೆ ಶೇ.3 ರ ಮಿತಿಯಲ್ಲಿ ನಡೆಸಲಾಯಿತು.

ಜು.,28 ರ ಪೂರ್ವಾಹ್ನ ವಿಶೇಷ ವರ್ಗಾವಣಾ ಪ್ರಕರಣಗಳಿಂದ ಬಾಧಿತರಾದ ನೌಕರರುಗಳಿಗೆ ಹಾಗೂ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಶೇ.3 ರ ಮಿತಿಯಲ್ಲಿ ಹಾಗೂ ಜು.29 ರಂದು 5 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಶೇ.6 ರ ಮಿತಿಯಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಯಿತು.

ಈ ವೇಳೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾದ ಸಂಬAಧಪಟ್ಟ ನೌಕರರಿಗೆ ವರ್ಗಾವಣೆ ಆದೇಶವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಕೆ.ಹೆಚ್ ಕೃಷ್ಣಮೂರ್ತಿ ಯವರು ಉಪಸ್ಥಿತರಿದ್ದರು.

39
0

LEAVE A REPLY

Please enter your comment!
Please enter your name here