Home ರಾಜಕಾರಣ ರಾಜ್ಯದ ತಲಾ ಆದಾಯವನ್ನು ಹೆಚ್ಚಿಸುವಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಅರಸಿಕೆರೆಯಲ್ಲಿ ಘರ್ಜಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ…

ರಾಜ್ಯದ ತಲಾ ಆದಾಯವನ್ನು ಹೆಚ್ಚಿಸುವಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಅರಸಿಕೆರೆಯಲ್ಲಿ ಘರ್ಜಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ…

151
0

ಹೆಚ್‌ ವಿ ನ್ಯೂಸ್

ಅರಸೀಕೆರೆ

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಇದಕ್ಕೆ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗುವುದಿಲ್ಲ ಅದಕ್ಕೆ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರು ರಾಜ್ಯ ಜನತೆ ನಂಬುವುದಿಲ್ಲ ಎಂದರು
ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ ಇದು ನುಡಿದಂತೆ ನಡೆದ ಸರ್ಕಾರದ ಸಾಧನೆ ನಾವು ಅಭಿವೃದ್ಧಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರೆಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ

ದೆಹಲಿಯಲ್ಲಿ ನಡೆದ ಹಿಂದುಳಿದ ವರ್ಗಗಳ ನಾಯಕರ ಸಮ್ಮೇಳನದಲ್ಲಿ ರಾಹುಲ್ ಗಾಂಧಿಯವರು ಹಿಂದುಳಿದವರ ಸಮುದಾಯಗಳ ಬಗ್ಗೆ ತಮ್ಮ ಗ್ರಹಿಕೆಯನ್ನು ಸ್ಪಷ್ಟಪಡಿಸಿದ್ದಾರೆ ಹಿಂದುಳಿದ ವರ್ಗಗಳು ಮಹಿಳೆಯರು ದಲಿತರು ಶೋಷಿತರು ಎಲ್ಲ ಜಾತಿಯರ ಬಡವರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿದೆ
ನಮ್ಮದು ಸಾಮಾಜಿಕ ನ್ಯಾಯ ಮತ್ತು ಬಡವರ ಪ್ರಗತಿಗಾಗಿ ಸಂವಿಧಾನದ ಮೌಲ್ಯಗಳ ಈಡೇರಿಕಗಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಏಕೈಕ ಪಕ್ಷ ದೇಶದಲ್ಲಿ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿ ಮಾಡುವುದು ನಮ್ಮ ಪಕ್ಷ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು

ಅರಸೀಕೆರೆ ಕ್ಷೇತ್ರದ ಜನರು ಮುಖ್ಯಮಂತ್ರಿಗಳ ಭಾಷಣದ ವೇಳೆಯಲ್ಲಿ ಶಿವಲಿಂಗೇಗೌಡರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದಾಗ ಮುಂದಿನ ದಿನಗಳಲ್ಲಿ ಶಿವಲಿಂಗೇಗೌಡರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ ಇದರಲ್ಲಿ ಯಾವುದೇ ಅನುಮಾನ ಇಲ್ಲ ಅವರ ರಾಜಕೀಯ ಮತ್ತು ಅರಸೀಕೆರೆ ಕ್ಷೇತ್ರದ ಅಭಿವೃದ್ಧಿ ಕೆಲಸ ಮೆಚ್ಚಿ ನೀವು ನಾಲ್ಕು ಬಾರಿ ಅವರನ್ನು ಚುನಾಯಿಸಿದ್ದೀರಿ ಮುಂದಿನ ದಿನಗಳಲ್ಲಿಯೂ ಸಹ ಅವರ ಗೆಲುವು ಶತಸಿದ್ದ ಎಂದರು
ಕಾರ್ಯಕ್ರಮಕ್ಕೆ ಉದ್ಘಾಟನೆಗೆ ಮುನ್ನ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನ ಉದ್ಘಾಟನಾ ಸಮಾವೇಶದಲ್ಲಿ ಪಾಲ್ಗೊಂಡರು

ಹಾಸನ ಜಿಲ್ಲೆಯ ಜನತೆ ಶಿವಲಿಂಗೇಗೌಡ ಮತ್ತು ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿ ರಾಜ್ಯಕ್ಕೆ ಎರಡು ಕಣ್ಣುಗಳ ಶಕ್ತಿ ಕೊಟ್ಟಿದ್ದಾರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಾಗ ಅರಸೀಕೆರೆ ಕ್ಷೇತ್ರದ ಕೆ ಎಂ ಶಿವಲಿಂಗೇಗೌಡ ಮತ್ತು ಹಾಸನ ಲೋಕಸಭಾ ಚುನಾವಣೆಯಲ್ಲಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿ ರಾಜ್ಯಕ್ಕೆ ಎರಡು ಕಣ್ಣುಗಳಾಗಿ ಹಾಸನದ ಜನತೆ ನಮಗೆ ಶಕ್ತಿ ಕೊಟ್ಟಿದ್ದೀರಿ ಅರಸಿಕೆರೆ ತಾಲೂಕಿಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮೊರಾರ್ಜಿ ದೇಸಾಯಿ ಶಾಲೆಗಳನ್ನು ನಿರ್ಮಿಸಿ ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ನೀಡುತ್ತ ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗಾಗಿ ವಿವಿಧ ಕೆಲಸಗಳುಸಗಳನ್ನು ಶಿವಲಿಂಗೇಗೌಡ ಅವರು ಮಾಡಿದ್ದಾರೆ.

ಮಹಾಭಾರತದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ ತಂದೆ ತಾಯಿ ಋಣ ದೇವರ ಋಣ ಗುರುವಿನ ಋಣ ಸಮಾಜದ ಋಣ ಈ ಋಣಗಳನ್ನು ಧರ್ಮದಿಂದ ತೀರಿಸಬೇಕು ಎಂದು ಹೇಳುತ್ತಾನೆ ಜನಪರ ಕಾರ್ಯಗಳನ್ನು ಮಾಡುತ್ತ ಶಿವಲಿಂಗೇಗೌಡರು ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಿದ್ದಾರೆ ಮರಕ್ಕೆ ಬೀರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇ ಮುಖ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದು ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಹೇಳಿದರು
ಸಮಾರಂಭದಲ್ಲಿ ಸಹಕಾರ ಸಚಿವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಏನ್ ರಾಜಣ್ಣ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಸನ್ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್. ಮಾತನಾಡಿದರು.

ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮನವಿ..

ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆಪಾದನೆಗೆ ಉತ್ತರಿಸಿ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರವರು ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಬಡವರಿಗೆ ಅತಿ ಹೆಚ್ಚು ಮನೆಗಳನ್ನು ನೀಡಿದ್ದಾರೆ ಇದರಿಂದ ಮುಖ್ಯಮಂತ್ರಿಗಳ ಬಡವರ ಕಾಳಜಿ ತೋರಿಸುತ್ತಿದೆ ಅರಸೀಕೆರೆ ಕ್ಷೇತ್ರದಲ್ಲಿ ಜಿಲ್ಲಾಮಟ್ಟದಲ್ಲಿ ನಡೆಯುವಂತೆ ಕಾರ್ಯಕ್ರಮವನ್ನು ಶಿವಲಿಂಗೇಗೌಡರು ಆಯೋಜಿಸಿದ್ದಾರೆ ಇವರ ಜನಪ್ರಿಯತೆ ಮತ್ತು ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳ ಅಭಿಮಾನವಾಗಿ ಇಷ್ಟೊಂದು ಜನತೆ ಸಮೋರಾ ಪಾದಿಯಲ್ಲಿ ಸೇರಿದೆ ಇದರಿಂದ ಬರುವ ದಿನಗಳಲ್ಲಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಬೇಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮನವಿ ಮಾಡಿದರು ಹಾಸನ ಜಿಲ್ಲಾಧಿಕಾರಿಗಳಾದ ಲತಾ ಕುಮಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣ ಅಧಿಕಾರಿಗಳು. ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸೇರಿದಂತೆ ರಾಜ್ಯಮಟ್ಟದ ಹಲವಾರು ಅಧಿಕಾರಿಗಳು ತರೀಕೆರೆ ಕ್ಷೇತ್ರದ ಶಾಸಕ ಸುರೇಶ್ ನಗರಸಭೆ ಅಧ್ಯಕ್ಷರಾದ ಸಮೀವುಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷರಾದ ಧರ್ಮ ಶೇಖರ್ ನಗರಸಭೆ ಉಪಾಧ್ಯಕ್ಷರಾದ ಮನೋಹರ್ ಉಪಸ್ಥಿತರಿದ್ದರು..

ಅರಸೀಕೆರೆ ನಗರಸಭೆ ವತಿಯಿಂದ  ಗಣ್ಯರಿಗೆ ಪೌರ ಸನ್ಮಾನ 

ಅರಸೀಕೆರೆ ನಗರಸಭೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸಚಿವ ದ್ವಯರು ಸೇರಿದಂತೆ  ಹಲವು ಗಣ್ಯರಿಗೆ ನಗರ ಸಭೆ ಅಧ್ಯಕ್ಷರಿಂದ  ಪೌರ ಸನ್ಮಾನ   ಕಾರ್ಯಕ್ರಮದಲ್ಲಿ ನಗರಸಭೆ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರಾದ ಕೆಎನ್ ರಾಜಣ್ಣ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್. ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಮತ್ತು ಶಾಸಕ ಶಿವಲಿಂಗೇಗೌಡರಿಗೆ ನಗರ ಸಭೆ ಅಧ್ಯಕ್ಷರಾದ ಎಮ್ ಸಮೀವುಲ್ಲಾ. ಆಯುಕ್ತಾರಾದ ಕೃಷ್ಣಮೂರ್ತಿ ಅರಸೀಕೆರೆ ತಾಲೂಕ್ ತಹಸೀಲ್ದಾರ್ ಸಂತೋಷ್ ಕುಮಾರ್. ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್  ಅರಸೀಕೆರೆ ತಾಲೂಕ್ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಧರ್ಮ ಶೇಖರ್ ಗಣ್ಯರಿಗೆ  ನಗರಸಭೆ ವತಿಯಿಂದ ಪೌರ ಸನ್ಮಾನ    ನೆಡೆಸಿದರು..

LEAVE A REPLY

Please enter your comment!
Please enter your name here