
ವಾಹನ ನಿಲುಗಡೆ ಸ್ಥಳ ಗುರುತಿಸಲು ಸೂಚನೆ
ಹಾಸನ ಜೂ 10(ಕರ್ನಾಟಕ ವಾರ್ತೆ):- ನಗರದಲ್ಲಿ ವಾಹನ ನಿಲುಗಡೆ ಸ್ಥಳ ಗುರುತಿಸಲು ಪೊಲೀಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಹಾನಗರ ಪಾಲಿಕೆ ಅಧಿಕಾರಿಗಳ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ತಹಸಿಲ್ದಾರ್ ಸೇರಿದಂತೆ ಸಮಿತಿಯನ್ನು ರಚಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾ ರಸ್ತೆ ಸುರಕ್ಷತೆ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು ನಗರ ಪ್ರಮುಖ ರಸ್ತೆಗಳಲ್ಲಿ ಹಾಗೂ ವೃತ್ತಗಳಲ್ಲಿ ಮದ್ಯದಲ್ಲಿ ಅಳವಡಿಸಿರುವ ಬ್ಯಾನರ್ ಕಡ್ಡಾಯವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ರಸ್ತೆ ಸುರಕ್ಷತೆಯ ಕುರಿತು ಪೋಸ್ಟರ್ ಗಳನ್ನು ಶಾಲೆಗಳಲ್ಲಿ ಅಳವಡಿಸುವಂತೆ ಹಾಗೂ ಮಳೆಗಾಲ ಆರಂಭವಾಗುತ್ತಿದ್ದು ನಗರದ ಎಲ್ಲೆಡೆ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದರು.
ಸೂಚನಾ ನಾಮಫಲಕಗಳನ್ನು ಅಳವಡಿಸುವಂತೆ ಹಾಗೂ ವೇಗ ನಿಯಂತ್ರಣ ನಾಮಫಲಕಗಳನ್ನೂ ಅಳವಡಿಸುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಖಾಸಗಿ ಬಸ್ ಗಳನ್ನೂ ನಗರ ಪ್ರವೇಶವನ್ನು ನಿಷೇಧಿಸುವಂತೆ ತಿಳಿಸಿದರು.
ಕೆ.ಎಸ್.ಆರ್.ಸಿ ಬಸ್ ಗಳು ಸೂಕ್ತ ಮಾರ್ಗವನ್ನು ಗುರುತಿಸಿ ಕಡ್ಡಾಯವಾಗಿ ಅದೇ ಮಾರ್ಗದಲ್ಲಿ ಚಲಿಸುವಂತೆ ಚಾಲಕರುಗಳಿಗೆ ನಿರ್ದೇಶನ ನೀಡಲು ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾರುತಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು
*********-