ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ
ಹಾಸನ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) – ಗಿಃ ಉ ಖಂಒ ಉ ಯೋಜನೆಯಡಿ ಹಾಸನ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಆ.15 ರಿಂದ ಸೆ.15 ರವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ರವರು ತಿಳಿಸಿದ್ದಾರೆ.
ಗ್ರಾಮೀಣ ಆರ್ಥಿಕತೆಯ ಬದಲಾಗುತ್ತಿರುವ ಅಗತ್ಯತೆಗಳು, ಜೀವನೋಪಾಯದ ಅವಕಾಶಗಳ ವಿಸ್ತರಣೆ ಹಾಗೂ ಸುಸ್ಥಿರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಬದಲಾಗಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) [ಗಿಃ-ಉ ಖಂಒ ಉ] ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಈ ಹೊಸ ಕಾಯ್ದೆಯು 2026ರ ಜುಲೈ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ಇದೇ ದಿನದಿಂದ ಒಉಓಖಇಉಂ ಕಾಯ್ದೆಯ ಬದಲಿಗೆ ಗಿಃ-ಉ ಖಂಒ ಉ ಕಾಯ್ದೆ ಜಾರಿಯಾಗಿದೆ.
ಗಿಃ ಉ ಖಂಒ ಉ ಯೋಜನೆಯಡಿ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವುದು ಹಾಗೂ ಯೋಜನೆಯ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದು ಜಾಬ್ ಕಾರ್ಡ್ ಮೇಳದ ಪ್ರಮುಖ ಉದ್ದೇಶವಾಗಿದೆ. ಜಾಬ್ ಕಾರ್ಡ್ ಹೊಂದಿರದ ಅರ್ಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ಜಾಬ್ ಕಾರ್ಡ್ ಒದಗಿಸುವುದು ಹಾಗೂ ಈಗಾಗಲೇ ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ವಿವರಗಳನ್ನು ಅಗತ್ಯವಿದ್ದಲ್ಲಿ ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಜಾಬ್ ಕಾರ್ಡ್ ಮೇಳದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರ್ಹ ಕುಟುಂಬಗಳಿAದ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಜಾಬ್ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು. ಅಲ್ಲದೆ, ಗಿಃ ಉ ಖಂಒ ಉ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳು, ಯೋಜನೆಯಡಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗಳು ಹಾಗೂ ಕೂಲಿಕಾರರಿಗೆ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು.
ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿಗಳು, ಕೂಲಿಕಾರರು ಹಾಗೂ ಅರ್ಹ ಕುಟುಂಬಗಳು ಈ ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿಯಿAದ ಮನವಿ ಮಾಡಲಾಗಿದೆ. ಅರ್ಹ ಕುಟುಂಬಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಜಾಬ್ ಕಾರ್ಡ್ಗೆ ಸಂಬAಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ.
ಜಾಬ್ ಕಾರ್ಡ್ ಮೇಳವು ಯಶಸ್ವಿಯಾಗಿ ನಡೆಯುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಗ್ರಾಮೀಣ ಕುಟುಂಬಗಳು ಇದರ ಪ್ರಯೋಜನ ಪಡೆಯುವಂತೆ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ – ಗ್ರಾಮೀಣಾಭಿವೃದ್ಧಿಗೆ ಮತ್ತಷ್ಟು ಬಲ ಎಂಬ ಆಶಯದೊಂದಿಗೆ ಆಯೋಜಿಸಲಾಗುತ್ತಿರುವ ಈ ಜಾಬ್ ಕಾರ್ಡ್ ಮೇಳದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಸನ ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ರವರು ತಿಳಿಸಿದ್ದಾರೆ.
***********-
ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ
Leave a Comment
