ಸಕಲೇಶಪುರ: ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರ್ ಟಿ ಓ ಕಛೇರಿ ಅಧಿಕಾರಿಗಳಿಗೆ ಸಾರ್ವಜನಿಕರು ಕಚೇರಿಗೆ ಬಂದಾಗ ಸಮಸ್ಯೆ ಗಳನ್ನು ಕಾಲಮಿತಿಯೊಳಗೆ ಬಗೆಹರಿಸಿ ಸೌಜನ್ಯಯುತವಾಗಿ ನಡೆಸಿಕೊಳ್ಳಬೇಕು. ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಟಿ.ಒ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಭರತ್ ಮಲ್ನಾಡ್