ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ : ಎಂ.ಕೆ ಬಾಲಸುಬ್ರಮಣ್ಯ     ಹಾಸನ        ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ.

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಇತ್ತೀಚೆಗೆ ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಆಯೋಜಿಸಿದ್ದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು ಸಂಸ್ಥೆಯಿAದ ಹಲವಾರು ಆಕರ್ಷಕ ಬಡ್ಡಿದರ ಯೋಜನೆಗಳಿದ್ದು ಅದರ ಸದುಪಯೋಗ ಪಡೆದು ಉದ್ಯಮಿಗಳಾಗಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವೃತ್ತ (2)ರ ಪ್ರಧಾನ ವ್ಯವಸ್ಥಾಪಕರಾದ ಎನ್.ಎಸ್. ಶಿವಣ್ಣ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಶಾಖಾ ಕಚೇರಿಯ ಶಾಖಾ ವ್ಯವಸ್ಥಾಪಕರಾದ ಬಿ.ಕೆ ರವೀಂದ್ರನಾಥ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
*-

Share This Article
Leave a Comment

Leave a Reply

Your email address will not be published. Required fields are marked *