Home ರಾಜಕಾರಣ ಸ್ಥಗಿತಗೊಂಡ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಸೃಜನ ಕಾರ್ಯಕ್ರಮ.

ಸ್ಥಗಿತಗೊಂಡ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಸೃಜನ ಕಾರ್ಯಕ್ರಮ.

38
0


ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಪಿಎಂಇಜಿಪಿ ಎಂಬುದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಹೊಸ ವ್ಯವಹಾರಗಳನ್ನು ಸ್ಥಾಪಿಸುವ ವ್ಯಕ್ತಿಗಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಸಹಾಯಧನವನ್ನು ಒದಗಿಸುತ್ತದೆ
ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇಕಡ 25ರಷ್ಟು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು ದೈಹಿಕವಾಗಿ ಅಶಕ್ತ ವ್ಯಕ್ತಿಗಳಿಗೆ ಮತ್ತು ವಿಶೇಷ ವರ್ಗಗಳಿಗೆ ಶೇಕಡ 35ರಷ್ಟು ಸಹಾಯಧನದ ಯೋಜನೆಯಾಗಿರುತ್ತದೆ ಇದರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದ್ದು ಹಣಕಾಸು ನೆರವು ಈ ಯೋಜನೆ ಹೊಸ ವ್ಯವಹಾರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳ ಮುಖಾಂತರ ಹಣಕಾಸಿನ ನೆರವು ನೀಡುತ್ತದೆ ಇದಲ್ಲದೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವು ವ್ಯಕ್ತಿಗಳು ವ್ಯವಹಾರ ನಡೆಸಲು ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ದಿ ಪಡಿಸಲು ಸಹಾಯ ಮಾಡುತ್ತದೆ
ಇಂತಹ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯು ಕಳೆದ ಹಲವಾರು ತಿಂಗಳಿಂದ ರಾಜ್ಯದ ಹಲವಾರು ಜಿಲ್ಲೆಗಳಿಂದ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಲು ಸಹ ಆಗಿರುವುದಿಲ್ಲ ಅಲ್ಲದೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವರ ಅರ್ಜಿಯು ಸಹ ಬ್ಯಾಂಕಿಗೆ ಬಂದಿರುವುದಿಲ್ಲ ಇದರಿಂದ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಸಾಲ ಪಡೆಯುತ್ತಾ ಕ್ಕಾಗಿ ಸ್ಪಷ್ಟ ಮಾಹಿತಿ ಇಲ್ಲದೆ ಗೊಂದಲಕ್ಕೀಡಾಗಿದ್ದಾರೆ

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆ ಇಲಾಖೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಕೆವಿಐಸಿ ಮತ್ತು ಕೆ ವಿ ಐ ಬಿ ಇದಕ್ಕೆ ಸಂಬಂಧಪಟ್ಟ ಕಚೇರಿಗಳು ಇದ್ದು ಇಲ್ಲಿಯ ಸಿಬ್ಬಂದಿಗಳಿಗೂ ಸಹ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಇಲ್ಲದೆ ಕಚೇರಿಗೆ ಬರುವ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಸರಿಯಾದ ಮಾಹಿತಿಯನ್ನು ಸಹ ನೀಡದೆ ಇಲಾಖೆ ಸಿಬ್ಬಂದಿಗಳು ಸಹ ಗೊಂದಲದಲ್ಲಿದ್ದಾರೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಮತ್ತು ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ರವರು ಈ ಸಂಬಂಧಪಟ್ಟ ಇಲಾಖೆಗೆ ಸೂಕ್ತ ಸೂಚನೆ ನೀಡಿ ರಾಜ್ಯದಲ್ಲಿ ಸಂಬಂಧಪಟ್ಟ ಇಲಾಖೆ ಮುಖಾಂತರ ಗೊಂದಲದಲ್ಲಿರುವ ನಿರುದ್ಯೋಗಿ ಯುವಕ ಯುವತಿ ಫಲಾನುಭವಿಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ಕೂಡಲೇ ಬ್ಯಾಂಕಿಗೆ ಕಳುಹಿಸಲು ಕ್ರಮ ಕೈಗೊಳ್ಳಬೇಕಾಗಿದೆ ಮತ್ತು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸರಳಿ ಕೃತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಅನುವು ಮಾಡಕೊಡಬೇಕಾಗಿ ಹಲವಾರು ಫಲಾನುಭವಿಗಳು ಕೇಂದ್ರ ಸರ್ಕಾರಕ್ಕೆ ತಮ್ಮ ಅಹವಾಲನ್ನು ಉದಯವಾಹಿನಿ ಪತ್ರಿಕೆಯ ಮುಖಾಂತರ ಮನವಿ ಮಾಡಿದ್ದಾರೆ

  ಹೊಯ್ಸಳ ವಿಜಯ ಹೆಚ್ ವಿ ನ್ಯೂಸ್ ಪ್ರಧಾನ ಸಂಪಾದಕರು ಉಮೇಶ್ ಬಾಣಾವರ

LEAVE A REPLY

Please enter your comment!
Please enter your name here