ಬೋರನಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಎಲ್. ರವಿಕುಮಾರ್ ಆಯ್ಕೆ
ಅರಸೀಕೆರೆ: ತಾಲೂಕಿನ ಗೀಜಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಸಕ ಶಿವಲಿಂಗೇಗೌಡ ಬೆಂಬಲಿತ ಅಭ್ಯರ್ಥಿ ಬಿ.ಎಲ್. ರವಿಕುಮಾರ್ ಆಯ್ಕೆಯಾಗಿದ್ದಾರೆ.
ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಒಟ್ಟು 11 ನಿರ್ದೇಶಕರ ಪೈಕಿ ಬಿ.ಎಲ್. ರವಿಕುಮಾರ್ 7 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ರಮೇಶ್ 4 ಮತಗಳನ್ನು ಪಡೆದು ಪರಾಭವಗೊಂಡರು.
ಗೆಲುವಿನ ಬಳಿಕ ಮಾತನಾಡಿದ ಬಿ.ಎಲ್. ರವಿಕುಮಾರ್, ಸಂಘದ ಸದಸ್ಯರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಲಾಗುವುದು. ರೈತರ ಹಿತಾಸಕ್ತಿ ಕಾಪಾಡುವುದರೊಂದಿಗೆ ಹಾಲು ಉತ್ಪಾದನೆ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು. ಸಹಕಾರ ಸಂಘವನ್ನು ಪಾರದರ್ಶಕ ಹಾಗೂ ಮಾದರಿ ಸಂಸ್ಥೆಯನ್ನಾಗಿ ಅಭಿವೃದ್ಧಿಪಡಿಸಲು ಎಲ್ಲರ ಸಹಕಾರದೊಂದಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ನೂತನ ಅಧ್ಯಕ್ಷರ ಆಯ್ಕೆಗೆ ಕಿರಣ್ ಕುಮಾರ್ ತಾಲೂಕು ಅಧ್ಯಕ್ಷರು ಕ ರ ವೇ ಮನು ಮಾಜಿ ಅಧ್ಯಕ್ಷರು ನಗರಸಭೆ ವೈಕೆ ದೇವರಾಜ್ ಮುಖಂಡರು ಹಾಗೂ ಇತರರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ವರದಿ: ಎಂ.ಡಿ. ನಾಸೀರ್, ಅರಸೀಕೆರೆ
ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ
Leave a Comment