ಹಾಸನ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪೈಕಿ ಒಂದಾಗಿದೆ. ಶ್ರೀ ಕ್ಷೇತ್ರಕ್ಕೆ ವರ್ಷಂಪ್ರತಿ ಜಗತ್ತಿನೆಲ್ಲೆಡೆಯಿಂದ ಕೋಟ್ಯಾಂತರ ಭಕ್ತರು ಆಗಮಿಸಿ ತಮ್ಮ ಆರಾಧ್ಯ ದೇವರ ದರ್ಶನವನ್ನು ಪಡೆಯುತ್ತಾರೆ.
ಹಿಂದೂ ವಿರೋಧಿ ಶಕ್ತಿಗಳು ಒಂದಾಗಿ, ಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ಬಳಗ ದೂರಿದೆ. ಈ ಸಂಬಂಧ ಈ ಸಂಬಂಧ ಹೋರಾಟ ಮಾಡಲು ಸಿದ್ದವಿದೆ ಎಂದು ಹೇಳಿದೆ.
ದೇವಾಲಯದ ಪ್ರತಿಷ್ಠೆಗೆ ಧಕ್ಕೆಯುಂಟುಮಾಡಲು ಷಡ್ಯಂತ್ರ ಡಾ. ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವ ಯತ್ನ ಲಾಭದ ಉದ್ದೇಶಕ್ಕೆ ಕ್ಷೇತ್ರದ ಬಗ್ಗೆ ಕೆಲವರಿಂದ ಸುಳ್ಳು ಆರೋಪ ಕೀಳುಮಟ್ಟದ ಭಾಷೆ ಬಳಕೆ ಕಿಡಿಗೇಡಿಗಳ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ಬಳಗ ಹಾಸನದ ವತಿಯಿಂದ ಹಾಸನದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಜನಾಗ್ರಹ ಪ್ರತಿಭಟನೆ ಜರುಗಿತು..
ವರದಿ:ಭರತ್ ಮಲ್ನಾಡ್