
ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎನ್.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೆಡೆಯಿತು.
ಇದೇ ಸಂದರ್ಭದಲ್ಲಿ 2025ರ ಯುವ ನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳಲ್ಲಿ ಯುವನಿಧಿಯು ಪ್ರಮುಖವಾಗಿದೆ.
ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಕೋರುತ್ತೇನೆ.
ಹಾಸನ ಜಿಲ್ಲಾ ಸಂಸದರಾದ ಶ್ರೀ ಶ್ರೇಯಸ್ ಎಂ ಪಟೇಲ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಎಂ.ಎ. ಗೋಪಾಲಸ್ವಾಮಿ ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರದ ಶಾಸಕರು, ಅಧಿಕಾರಿಗಳು ಕೆಡಿಪಿ ಸದಸ್ಯರು ಹಾಜರಿದ್ದರು.