
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಮಾಜಿ ಸಚಿವ ಮತ್ತು ಶಾಸಕರಾದ ಹೆಚ್.ಡಿ.ರೇವಣ್ಣ ಅವರು ಭೇಟಿ ಮಾಡಿ, ಹಾಸನ ಜಿಲ್ಲೆಯ ರೈಲ್ವೆ ಯೋಜನೆಗಳ ಬಗ್ಗೆ ಮನವಿ ಮಾಡಿದರು.
ದುದ್ದ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ಯೋಜನೆಗೆ 150 ಕೋಟಿ, ಮೊಸಳೆ ಹೊಸಳ್ಳಿ ಬಳಿ ಮೇಲ್ಸೇತುವೆ ಮತ್ತು ನೂತನ ಪ್ಲಾಟ್ ಫಾರಂ 120 ಕೋಟಿ, ಮೊಸಳೆ ಹೊಸಳ್ಳಿಯಲ್ಲಿ ಎಲ್ಲ ರೈಲುಗಳ ನಿಲುಗಡೆ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು, ಕುಶಾಲನಗರ ನಡುವೆ ಹೊಸ ರೈಲು ಮಾರ್ಗಕ್ಕೆ ಸರ್ವೆಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ಕೂಡಲೇ ಸರ್ವೆ ಕಾರ್ಯ ಆರಂಭಿಸಿ ನುತನ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಎಲ್ಲ ಬೇಡಿಕೆಗಳಿಗೆ ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.







