ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಹಾಸನ ಜಿಲ್ಲೆಗೆ ಇದುವರೆಗೆ 3105.78 ಕೋಟಿ ರೂ. ಹಣ ಬಿಡುಗಡೆ ಆಗಿದ್ದು, ಹಾಸನ ಜಿಲ್ಲೆಯಲ್ಲಿ ಶೇ.99.5ರಷ್ಟು ಅನುಷ್ಠಾನಗೊಂಡಿರುವುದು ಶ್ಲಾಘನೀಯ ಎಂದು ಶಾಸಕರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್‌ನಲ್ಲಿAದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬುವುದರ ಜೊತೆಗೆ ರಾಜ್ಯದ ಆರ್ಥಿಕ ಪುನಶ್ಚೇತನಕ್ಕೂ ಸಹಕಾರಿಯಾಗಿದೆ ಎಂದರಲ್ಲದೆ ತಲಾ ಆದಾಯ ಕೂಡಾ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಉಂಟುಮಾಡಬೇಕು ಎಂದರಲ್ಲದೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ನೋಟು ಅಮಾನ್ಯ, ಅವೈಜ್ಞಾನಿಕ ಜಿಎಸ್‌ಟಿ ನೀತಿ, ಕೋರೋನಾ ಸಮಯದಲ್ಲಿನ ಲಾಕ್ ಡೌನ್ ನಿಂದ ಜನರು ಆರ್ಥಿಕವಾಗಿ ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಜನರಲ್ಲಿ ಕೊಳ್ಳುವ ಶಕ್ತಿ ಕುಸಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಕುಸಿತಕಂಡಿತು. ಗ್ರಾಮೀಣ ಭಾಗದ ಜನತೆ ಹಾಗೂ ಮಧ್ಯಮ ವರ್ಗದವರಲ್ಲಿ ಖರೀದಿ ಸಾಮರ್ಥ್ಯ ವೃದ್ಧಿಯಾದರೆ ರಾಜ್ಯ, ದೇಶದ ಆರ್ಥಿಕತೆ ಸರಿದೂಗಲಿದೆ ಎಂಬ ಹಿನ್ನೆಲೆಯಲ್ಲಿ ಪಂಚಗ್ಯಾರAಟಿ ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಯಾವುದೇ ಮದ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ನೇರವಾಗಿ ತಲುಪುತ್ತಿರುವ ಜಗತ್ತಿನ ಅತಿ ದೊಡ್ಡ ಕಾರ್ಯಕ್ರಮ ಪಂಚಗ್ಯಾರAಟಿಗಳು. ಯೋಜನೆ ವಿರೋಧಿಸುವವರು ಬೆರಳೆಣಿಕೆಯಷ್ಟು ಆದರೆ ಸ್ವಾಗತಿಸಿ ಆಶೀರ್ವದಿಸುತ್ತಿರುವವರು ಲಕ್ಷಾಂತರ ಮಂದಿ ಎಂದರು.
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರುಗಳು ಮತ್ತು ಸದಸ್ಯರು ಮಾತನಾಡಿ, ಇಷ್ಟು ದೊಡ್ಡ ಮೊತ್ತದ ಅನುದಾನವನ್ನು ಹಾಸನ ಜಿಲ್ಲೆಗೆ ನೀಡಿದ್ದಕ್ಕೆ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರನ್ನು ಅಭಿನಂದಿಸಿದರು.
ದೇವರ ದರ್ಶನ:- ಶಕ್ತಿ ಯೋಜನೆಯಿಂದ ಗ್ರಾಮೀಣ ಜನತೆ ಪುಣ್ಯ ಕ್ಷೇತ್ರಗಳ ದರ್ಶನ ಮಾಡಲು ಸಹಕಾರಿಯಾಗಿದೆ. ಕಳೆದ ಬಾರಿ ಹಾಸನಾಂಭ ದರ್ಶನಕ್ಕೆ ಬೀದರ್‌ನಿಂದ ಚಾಮರಾಜನಗರದವರೆಗೆ ಮಹಿಳೆಯರು ಶಕ್ತಿ ಯೋಜನೆ ಮೂಲಕ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. 20 ಲಕ್ಷ ಭಕ್ತರು ಹಾಸನಾಂಭ ದರ್ಶನ ಪಡೆದಿದ್ದು ಇದರಲ್ಲಿ ಮಹಿಳೆಯರದ್ದು ಸಿಂಹಪಾಲು. ದೇವರ ಹುಂಡಿಯಲ್ಲಿ 14 ಕೋಟಿ ರೂ. ಹಣ ಸಂಗ್ರಹವಾಗಿದ್ದು ದಾಖಲೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಹೇಳಿದರು.
ಸಾಲದ ಹಣ ಕಡಿತ ಇಲ್ಲ:- ಗೃಹಲಕ್ಷ್ಮಿ ಹಣವನ್ನು ಸಾಲದ ಕಂತುಗಳಿಗೆ ಬ್ಯಾಂಕುಗಳು ಕಡಿತ ಮಾಡಿಕೊಳ್ಳುತ್ತಿಲ್ಲ. ಒಂದು ವೇಳೆ ಕಡಿತ ಆದರೂ ಎರಡು ಮೂರು ದಿನದಲ್ಲಿ ಆ ಹಣ ಖಾತೆಗೆ ವಾಪಸ್ ಆಗುತ್ತಿದೆ. ಈ ಬಗ್ಗೆ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಸಭೆಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಗಳಲ್ಲಿ ಪ್ರಚಾರ:- ಯುವನಿಧಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಬಿ.ಆರ್. ಅವರು ಹೇಳಿದರು. ಜಿಲ್ಲೆಯ 264 ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ದೊಡ್ಡ ದೊಡ್ಡ ಬ್ಯಾನರ್ ಅಳವಡಿಸಿ ಪ್ರಚಾರ ನಡೆಸುವುದರ ಜೊತೆಗೆ ಕಾಲೇಜುಗಳಲ್ಲಿ ಪ್ರಚಾರ ಕಾರ್ಯಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಂಚ ಗ್ಯಾರಂಟಿಗಳ ಪ್ರಗತಿ
ಗೃಹಲಕ್ಷ್ಮಿ:- ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 4,27,269 ಫಲಾನುಭವಿಗಳಿದ್ದಾರೆ. 2023ರಿಂದ ಜೂನ್ ವರೆಗೆ 1783 ಕೋಟಿ ರೂ. ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದು ಶೇ.99.5 ರಷ್ಟು ಮಂದಿಗೆ ಯೋಜನೆ ತಲುಪಿದೆ. ಜಿಲ್ಲೆಯಲ್ಲಿ 4201 ಮಂದಿ ಫಲಾನುಭವಿಗಳು ಮರಣ ಹೊಂದಿದ್ದಾರೆ. ಹೀಗಾಗಿ ಮರಣ ಹೊಂದಿರುವವರ ಪಟ್ಟಿ ಕ್ರೋಢೀಕರಿಸಿ ರಾಜ್ಯ ಮತ್ತು ಜಿಲ್ಲಾ ಸಮಿತಿಗೆ ಪ್ರತಿ ತಿಂಗಳು ನೀಡಬೇಕು ಎಂದು ದಿನೇಶ್ ಗೂಳಿಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ:- ಗೃಹಜ್ಯೋತಿ ಯೋಜನೆಯಡಿ 5,35,989 ಗ್ರಾಹಕರು ನೋಂದಣಿಯಾಗಿದ್ದು 19,78,6793 ಯುನಿಟ್ ಉಚಿತ ವಿದ್ಯುತ್ ಬಳಕೆ ಮಾಡಿದ್ದಾರೆ. ಇದಕ್ಕಾಗಿ ಸರ್ಕಾರ 415 ಕೋಟಿ ರೂ. ಸಬ್ಸಿಡಿ ಹಣವನ್ನು ಪಾವತಿ ಮಾಡಲಾಗಿದ್ದು ಶೇ 100ರಷ್ಟು ಪ್ರಗತಿ ಸಾಧಿಸಲಾಗಿದೆ.
ಶಕ್ತಿ ಯೋಜನೆ:- ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಸರಾಸರಿ 2 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, 485 ಕೋಟಿ ರೂ. ಟಿಕೆಟ್ ಹಣವನ್ನು ನಿಗಮಕ್ಕೆ ಸರ್ಕಾರ ಪಾವತಿ ಮಾಡಿದೆ.
ಅನ್ನಭಾಗ್ಯ:- ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 4,29,023 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ 407.05 ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಫೆಬ್ರವರಿಯಿಂದ 170 ರೂ. ಹಣದ ಬದಲಿಗೆ ಐದು ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. 84% ಬಿಪಿಎಲ್ ಕಾರ್ಡ್ದಾರರಿದ್ದು ಎಲ್ಲರಿಗೂ ಸಮರ್ಪಕವಾಗಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.
ಯುವನಿಧಿ:- ಯುವನಿಧಿ ಯೋಜನೆಗೆ ಸಂಬAಧಿಸಿದAತೆ 6367 ಫಲಾನುಭವಿಗಳಿಗೆ 15.78 ಕೋಟಿ ರೂ. ಹಣವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಕಾಲೇಜುಗಳಲ್ಲಿ ಯೋಜನೆ ಕುರಿತು ಪ್ರಚಾರ ಮಾಡಿ ನೋಂದಣಿ ಅಭಿಯಾನ ನಡೆಸಲಾಗುತ್ತಿದೆ.
ಹಾಸನದ ಶೇ.99.50 ನಾಗರಿಕರು ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹೀಗೆಯೇ ಮುಂದುವರೆಯಲಿ ಎಂದು ಹೇಳುತ್ತಿದ್ದಾರೆಯೇ ಹೊರತು ಯಾರೊಬ್ಬರು ಈ ಯೋಜನೆ ಸ್ಥಗಿತಗೊಳಿಸಿ ಎಂಬ ಮಾತು ಎಲ್ಲೂ ಕೇಳಿಬರುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕು ಅಧ್ಯಕ್ಷರಾದ ಹೆಚ್.ಪಿ.ಶ್ರೀಧರ್ ಗೌಡ, ಧರ್ಮಶೇಖರ, ಆನಂದಮೂರ್ತಿ ಜೆ.ಬಿ, ಶಿವಕುಮಾರ್, ಸದಸ್ಯರಾದ ಕಮಲಮ್ಮ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಬಿ.ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಉಪಸ್ಥಿತರಿದ್ದರು.
*********-







