
ಈ ಸಂದರ್ಭದಲ್ಲಿ ಹಿಂದೂಳಿದ ವರ್ಗಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀ ಮಲ್ಲಸಂದ್ರ ಶಿವಣ್ಣ ಅವರಿಗೆ ವಿಶೇಷ ಸನ್ಮಾನ ಸಲ್ಲಿಸಲಾಯಿತು. ಇದೇ ವೇಳೆ ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ಹೊಸದಾಗಿ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು, ಸಮಾಜಮುಖಿ ಚಟುವಟಿಕೆಗಳಲ್ಲಿ ಹಿಂದೂಳಿದ ವರ್ಗಗಳ ಒಕ್ಕೂಟದ ಕೊಡುಗೆಯನ್ನು ಶ್ಲಾಘಿಸಿ, ಸಂಘಟನೆಯ ಶಕ್ತಿ ಸಮಾಜದ ಸಮಗ್ರ ಅಭಿವೃದ್ಧಿಗೆ ಬಲವಾಗಿದೆಯೆಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಗಣ್ಯರು ಹಾಜರಿದ್ದರು.
ವರದಿ: ಮಂಜುನಾಥ್ ಕೆ.ಎನ್.
