ಅರಸೀಕೆರೆಯಲ್ಲಿ ಬುಧವಾರ ಸಂವಿಧಾನ ದಿನಾಚರಣೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಅರಸೀಕೆರೆ ತಾಲ್ಲೂಕು ಆಡಳಿತ ತಾಲೂಕು ಪಂಚಾಯಿತಿ ಸಮಾಜ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಅರಸೀಕೆರೆ ಇವರ ಸಂಯುಕ್ತ ಆಶ್ರಯದಲ್ಲಿ  ಅದ್ದೂರಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಸೀಕೆರೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಪರವಶಿವಮೂರ್ತಿ ತಿಳಿಸಿದ್ದಾರೆ

ಈ ಸಮಾರಂಭದ ಅಧ್ಯಕ್ಷತೆಯನ್ನು ಅರ್ಸೀಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸಲಿದ್ದು   ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್ ಡಿ ದೇವೇಗೌಡ ರವರು  ಸೇರಿದಂತೆ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಸೇರಿದಂತೆ ಹಲವಾರು ಶಾಸಕರು ವಿಧಾನ ಪರಿಷತ್ ಸದಸ್ಯರು  ಹಾಗೂ ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ 

ಅರಸೀಕೆರೆ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್. ಕಾರ್ಯನಿರ್ವಹಣಾಧಿಕಾರಿಗಳಾದ ಗಂಗಣ್ಣ ಬಿ ವೈ ಎಸ್ ಪಿ ಗೋಪಿ  ಪೌರಾಯುಕ್ತರಾದ  ಎಚ್ ಟಿ ಕೃಷ್ಣಮೂರ್ತಿ  ಭಾಗವಹಿಸಲಿದ್ದು  ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಂಘಟನೆಯ ಪದಾಧಿಕಾರಿಗಳು  ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಇಲಾಖೆಯ ಸರ್ಕಾರಿ ನಾಮ ನಿರ್ದೇಶಕ ಸದಸ್ಯರು ಹಾಗೂ  ಪತ್ರಿಕಾ ವರದಿಗಾರರು ಹಾಗೂ ಸಮಸ್ತ  ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಸ್ ಪರಶಿವಮೂರ್ತಿ ತಿಳಿಸಿದ್ದಾರೆ

ಸಂವಿಧಾನ ಪುಸ್ತಕ ಭಾವಚಿತ್ರದೊಂದಿಗೆ ಮೆರವಣಿಗೆ

ಅರಸೀಕೆರೆ ನಗರದ ಎಪಿಎಂಸಿ ಆವರಣದಿಂದ ಸಂವಿಧಾನ ಪುಸ್ತಕದ ಭಾವಚಿತ್ರದೊಂದಿಗೆ ಪದವಿಪೂರ್ವ ಕಾಲೇಜು. ಪದವಿ ಕಾಲೇಜು ವೃತ್ತಿಪರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಹಾಗೂ ಸಾರ್ವಜನಿಕರಿಂದ ಹಳೆ ಮಾಧ್ಯಮಿಕ ಶಾಲಾ ಆವರಣದ ವರಗೆ ಮೆರವಣಿಗೆ

ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಪುತಳಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ ಭಾರತರತ್ನ  ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಸಂವಿಧಾನ ಪೀಠಿಕೆ ವಾಚನ  ಹೀಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಪರಶಿವಮೂರ್ತಿ ತಿಳಿಸಿದ್ದಾರೆ

Share This Article
Leave a Comment

Leave a Reply

Your email address will not be published. Required fields are marked *