ಅರಸೀಕೆರೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ
ಪತಿ ವರ್ಷದಂತೆ ಡಿಸೆಂಬರ್ 23ನೇ ತಾರೀಕಿನಂದು ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಚೌದರಿ ಚರಣ್ ಸಿಂಗ್ ರವರ ಜನ್ಮ ದಿನಾಚರಣೆ ಅಂಗವಾಗಿ ಕಿಸಾನ್ ದಿವಸ್ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಗುತ್ತಿದೆ ಅದರಂತೆ ಅರಸೀಕೆರೆ ತಾಲೂಕಿನ ಕೃಷಿ ಇಲಾಖೆ. ಅರಸೀಕೆರೆ ಕೃಷಿಕ ಸಮಾಜ. ತೋಟಗಾರಿಕೆ ಇಲಾಖೆ ರೇಷ್ಮೆ ಇಲಾಖೆ. ಪಶು ಸಂಗೋಪನೆ ಮೀನುಗಾರಿಕೆ ಹಾಗೂ ಕಂದಾಯ ಇಲಾಖೆ ಮತ್ತು ಹಾಗೂ ತಾಲೂಕಿನ ಎಲ್ಲಾ ರೈತ ಸಂಘಟನೆಗಳ ಸಹಭಾಗಿತ್ವದಲ್ಲಿ ದಿನಾಂಕ 23 12 2025ರ ಮಂಗಳವಾರದಂದು ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಅರಸೀಕೆರೆ ತಹಸಿಲ್ದಾರ್ ರವರ ಕಚೇರಿ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿತ್ತು ಸದರಿ ಕಾರ್ಯಕ್ರಮದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸಲಿದ್ದು ಅರಸಿಕೆರೆ ತಾಲೂಕಿನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ರೈತ ಸಂಘದ ಮುಖಂಡರುಗಳು ಹಾಗೂ ಸಂಘ ಸಂಸ್ಥೆಯ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತ ಮಹಿಳೆಯರು ಸೇರಿದಂತೆ ಸ್ವಯಂ ಪ್ರೇರಿತರಾಗಿ ರೈತ ದಿನಾಚರಣೆಯಲ್ಲಿ ಭಾಗವಹಿಸಬೇಕಾಗಿ ಅರಸೀಕೆರೆಯ ಸಹಾಯಕ ಕೃಷಿ ನಿರ್ದೇಶಕರಾದ ಎ ಪಿ ಶಿವಕುಮಾರ್ ತಿಳಿಸಿದ್ದಾರೆ







