ಕೇಂದ್ರ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಳೆ ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಅರಸಿಕೆರೆ ತಾಲೂಕಿನ ವಿವಿಧಡೆಗೆ ಭೇಟಿ ನೀಡಲಿದ್ದು ಗಂಡಸಿಯ ಜಾತ್ಯತೀತ ಜನತಾದಳದ ಮುಖಂಡರಾದ ಗಂಡಸಿ ಮಂಜಣ್ಣನವರ ಪುತ್ರಿಯವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಗಂಡಸಿ ಮಂಜಣ್ಣ ಇವರು ಹಾಸನ ಜಿಲ್ಲಾ ಜನತಾ ಬಜಾರ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿದ್ದು ಇದೇ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಜೆಡಿಎಸ್ ಪಕ್ಷದ ಪ್ರಭಾವಿ ಮುಖಂಡರಾದ ಎಚ್ ಡಿ ರೇವಣ್ಣ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರು ಮಾಜಿ ಸಚಿವರಾದ ಬಿ ಶಿವರಾಂ ಸೇರಿದಂತೆ ಹಲವಾರು ಜೆಡಿಎಸ್ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ







