

ಸಿ.ಇ.ಒ. ಶುಭಂ ಶುಕ್ಲಾ ಕ್ಷೇತ್ರ ಭೇಟಿ
ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಂ ಶುಕ್ಲಾ ರವರು ಇಂದು ಸಕಲೇಶಪುರ ತಾಲ್ಲೂಕು ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಕ್ಷೇತ್ರ ಭೇಟಿ ನೀಡಿ ನರೇಗಾ ಯೋಜನೆ, 5054 ಹಾಗೂ ಇತರೆ ಯೋಜನೆಗಳಡಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.
ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆ.ಆರ್,ಐ.ಡಿ.ಎಲ್. ಇಲಾಖೆಯಿಂದ 5054 ಯೋಜನೆಯಡಿ ಅನುಷ್ಠಾನಗೊಂಡ ಸಿ.ಸಿ. ರಸ್ತೆ, ಸಿ.ಸಿ. ಚರಂಡಿ ಕಾವiಗಾರಿಗಳನ್ನು ಪರಿಶೀಲಿಸಿದರು. ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಸಿ.ಸಿ. ಚರಂಡಿ ಕಾಮಗಾರಿಯನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ತಿಳಿಸಿದರು.
ತೆರೆದ ಬಾವಿ, ಅಡಿಕೆ ಸಸಿ ನಾಟಿ ಮುಂತಾದ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಂಡ ವೈಯಕ್ತಿಕ ಫಲಾನುಭವಿಗಳೊಂದಿಗೆ ಸಮಾಲೋಚಿಸಿದರು. ಹಾನುಬಾಳು ಗ್ರಾಮದ ಕರ್ನಾಟಕ ಪುಬ್ಲಿಕ್ ಶಾಲೆಗೆ ಭೇಟಿ ನೀಡಿ, ಶಾಲಾ ಮಧ್ಯಾಹ್ನನದ ಬಿಸಿಯೂಟ ಯೋಜನೆ, ಶೌಚಾಲಯ ವ್ಯವಸ್ಥೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಪರಿಶೀಲಿಸಿ ಅಲ್ಲಿನ ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಮಕ್ಕಳು, ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪ್ರತಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕ್ಷೇತ್ರ ಭೇಟಿಯಲ್ಲಿ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಬಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರುಗಳು ಹಾಗೂ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
********-
