ಪ್ರಗತಿಯ ವಿವರ ಸಲ್ಲಿಸಲು ಸೂಚನೆ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ಪ್ರಗತಿಯ ವಿವರ ಸಲ್ಲಿಸಲು ಸೂಚನೆ
ಹಾಸನ : ಜಿಲ್ಲಾ ಗ್ರಂಥಾಲಯದ ಪ್ರಗತಿ ಸಾಧಿಸಿರುವ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಂಥಾಲಯದಲ್ಲಿರುವ ಶೇಡ್‌ನಲ್ಲಿ ಮಕ್ಕಳು ಕುಳಿತು ಓದಲು ಅನುಕೂಲವಾಗುವಂತೆ ಸಜ್ಜುಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಂಥಾಲಯದ ಆವರಣದಲ್ಲಿ ಕಾಂಪೌAಡ್ ಪಕ್ಕದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಕಸದ ಬುಟ್ಟಿಗಳನ್ನಿಡಲು ಸೂಚಿಸಿದರು.

ಗ್ರಂಥಾಲಯಕ್ಕೆ ಯಾವ ಯಾವ ನಿಯತಕಾಲಿಕೆ ಬರುತ್ತಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ ಪೋನ್ ಬಳಕೆ ಮಾಡಿದರೆ ದಂಡ ವಸೂಲಿ ಮಾಡಬೇಕು ನೂತನ ಕಟ್ಟಡ ಕಾಮಗಾರಿಯಲ್ಲಿ ಬಾಕಿ ಉಳಿದಿರುವ ಕೆಲಸವನ್ನು ನಿರ್ಮಿತಿ ಕೇಂದ್ರದವರು ಪರಿಶೀಲನೆ ಮಾಡಿ ಒಂದು ವರದಿ ನೀಡುವಂತೆ ಸೂಚಿಸಿದರು.

ಗ್ರಂಥಾಲಯದಲ್ಲಿ ಓದುಗರಿಗೆ ತೊಂದರೆ ಆಗದಂತೆ ಹಾಸನಾಂಬ ಕಲಾಕ್ಷೇತ್ರದ ಹೊರ ಆವರಣದಲ್ಲಿ ಮೈಕ್ ಬಳಕೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಂಥಾಲಯದಲ್ಲಿರುವ ಸ್ಪರ್ಧಾ ಕುಟೀರಕ್ಕೆ ಅದ್ಯಯನ ಮಾಡಲು ಬರುವ ಮಕ್ಕಳಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಂಥಾಲಯಕ್ಕೆ ಓದಲು ಬರುವ ವಿದ್ಯಾರ್ಥಿಗಳ ನೋಂದಣಿ ಮಾಡಿಸುವುದರ ಜೊತೆಗೆ ಒಂದು ಗ್ರೂಪ್ ಮಾಡಿ ಎಂದು ತಿಳಿಸಿದರು. ಒಂದು ಟೆಸ್ಟ್ ಮಾಡಿ ವಿದ್ಯಾರ್ಥಿಗಳಿಗೆ ಓರಿಯಂಟೆಷನ್ ಮಾಡಿ ಎಂದು ಹೇಳಿದರು.

ಬಡಮಕ್ಕಳಿಗೆ ಓರಿಯೆಂಟೆಷನ್ ಮಾಡಿ ಪರೀಕ್ಷೆಗೆ ತಯಾರಿ ಮಾಡುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಗ್ರಂಥಾಲಯದಲ್ಲಿ ಓದಲು ಬರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ದೂದ್ ಪೀರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ರಾಮಕೃಷ್ಣ ಗ್ರಂಥಾಲಯದ ಅಧಿಕಾರಿಗಳು ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *