ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ
ಶಿವಮೊಗ್ಗ, ಜು, 27(ಕರ್ನಾಟಕ ವಾರ್ತೆ) ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರವಾಗಿ ಸಾಲ ಮತ್ತು ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಮುಂತಾದ ವ್ಯವಹಾರ ವಹಿವಾಟುಗಳನ್ನು ಪ್ರಾರಂಭಿಸಲು ಕನಿಷ್ಠ ರೂ 1.00 ಲಕ್ಷದಿಂದ ಗರಿಷ್ಠ ರೂ.2.00 ಲಕ್ಷಗಳವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ. ಈ ಪೈಕಿ ಶೇ. 20ರಷ್ಟು ಸಹಾಯಧನ ಸಿಗಲಿದ್ದು, ಉಳಿಕೆ ಮೊತ್ತ ರೂ.80,000/- ವರೆಗೆ ಶೇ. 4ರಷ್ಟು ವಾರ್ಷಿಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ.
ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.18 ರಿಂದ 65 ವರ್ಷದೊಳಗಿರಬೇಕು.
ಮಹಿಳೆಯರಿಗೆ ಶೇ. 33 ಹಾಗೂ ದಿವ್ಯಾಂಗದವರಿಗೆ ಶೇ. 5 ರಷ್ಟು ಮೀಸಲಾತಿ ಇರಲಿದಗದು, ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
ಅರ್ಹ ಆಸಕ್ತರು ದಿ: 31-08-2026ರ ಸಂಜೆ 5:30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ www.ksbdb.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಹಾಯವಾಣಿ (Helpline): 8029605888, 8762249230, 08182 255294 ಹಾಗೂ ಮಂಡಳಿಯ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಪುಟಗಳನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *