
ಇದೇ ಮೊದಲ ಬಾರಿಗೆ ಮನೆ ಮನೆಗೆ ಪೊಲೀಸ್ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ, ಈ ಕಾರ್ಯಕ್ರಮದ ಉದ್ದೇಶ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದು. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ.