


ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:
ಮೈಸೂರು ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸುವುದು.
ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನದ ಬಗ್ಗೆ ಮಾಹಿತಿ ಪಡೆದು, ಪೂರ್ಣ ಪ್ರಮಾಣದಲ್ಲಿ ಅನುದಾನ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿಗತಿಗಳ ಮಾಹಿತಿ ಪಡೆದು, ಕಾಮಗಾರಿಗಳ ವೇಗ ಹೆಚ್ಚಿಸುವ ಸಂಬಂಧ ಸೂಚನೆ ನೀಡಿದರು.
ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.
ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಆಗಿರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಶಾಸಕರುಗಳು ಮಾಹಿತಿ ಒದಗಿಸಿದರು.
ಸರ್ಕಾರ ಪ್ರತೀ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಒದಗಿಸಿದ್ದು, ಇದನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಫಲಾನುಭವಿಗಳ ಜೊತೆ ಸಂಪರ್ಕದಲ್ಲಿ ಇರುವಂತೆ ಸೂಚನೆ ನೀಡಿದರು
ಎಲ್ಲಾ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗಳಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನ ಧೋರಣೆ ಬಗ್ಗೆ ಎಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು