ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2025ರ ಕರಡು ನಿಯಮಗಳನ್ನು ಪರಿಶೀಲಿಸಿ ವರದಿ ನೀಡಲು ನೇಮಿಸಲಾಗಿದ್ದ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿಯಿಂದ 18 ಆಕ್ಷೇಪಣೆ ಹಾಗೂ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವುಗಳನ್ನು ಇಂದು ನಡೆದ ಸಭೆಯಲ್ಲಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಲಾಯಿತು.

ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ 8 ಮಂದಿ ಅಕ್ಷೇಪಣೆಗಳನ್ನು ಸಲ್ಲಿಸಿ, ಕೆಲವು ಸಲಹೆಗಳನ್ನು ನೀಡಿದ್ದರು. ಇವುಗಳನ್ನು ಸಹ ಸಭೆಯಲ್ಲಿ ಚರ್ಚಿಸಲಾಯಿತು.

ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ 2025ರ ಕರಡು ನಿಯಮಗಳಲ್ಲಿ ಕೆಲವು ಬದಲಾವಣೆ ತರುವ ಮೂಲಕ ಸುಧಾರಣೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರಿಂದ ಆಯ್ಕೆಯಾಗಿ ಗ್ರಾಮ ಪಂಚಾಯತಿಗಳಿಗೆ ಚುನಾಯಿತರಾಗುವ ಜನಪ್ರತಿನಿಧಿಗಳ ಹಕ್ಕುಗಳಿಗೆ ಧಕ್ಕೆಯಾಗದಂತೆ ನಿಯಮಗಳನ್ನು ರೂಪಿಸಬೇಕಾದ ಅವಶ್ಯಕತೆಯಿದೆ.

ಉಮೇಶ್ ಬಾಣಾವರ
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!
Share This Article
Leave a Comment

Leave a Reply

Your email address will not be published. Required fields are marked *