ಕರ್ನಾಟಕ ಸರ್ಕಾರದ ಅರಸೀಕೆರೆ ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ ತೆಂಗು ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 2025 26 ನೇ ಸಾಲಿನ ಪ್ರಚಾರ ಮತ್ತು ಸಾಹಿತ್ಯ ಯೋಜನೆಯಡಿ ತೆಂಗು ಬೆಳೆಗಾರರಿಗೆ ತಾಂತ್ರಿಕ ಕಾರ್ಯಗಾರ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯ ಸವಲತ್ತುಗಳ ಕಾರ್ಯದೇಶ ಮತ್ತು ಪರಿಕರಗಳ ವಿತರಣೆ ಕಾರ್ಯಕ್ರಮವು ಇಂದು ನಡೆಯಿತು ಅರಸೀಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡ ಉಪಸ್ಥಿತರಿದ್ದರು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸೀಮಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು