ಮುಖ್ಯ ವಿಷಯಕ್ಕೆ ಹೋಗಿ
Latest
ವಿಶೇಷ ವರದಿ

ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಕೊಂಡೊಯ್ಯಬೇಕಿದೆ ರವಿ ನಾಕಲಗೋಡು

ಅರಸೀಕೆರೆ. ... ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ಕೊಂಡೊಯ್ಯಬೇಕು ರವಿ ನಾಕಲಗೂಡು ಅರಸೀಕೆರೆ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಸಾಹಿತ್ಯ ಪರಿಷತ್ ಸದಸ್ಯರ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಸಭೆಯನ್ನು ಉ...

ನಿರ್ವಾಹಕ· 3 ನಿಮಿಷ ಓದು· ಅರಸೀಕೆರೆ
ಹಂಚಿಕೊಳ್ಳಿ:

ಅರಸೀಕೆರೆ. ... ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ಕೊಂಡೊಯ್ಯಬೇಕು ರವಿ ನಾಕಲಗೂಡು ಅರಸೀಕೆರೆ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಸಾಹಿತ್ಯ ಪರಿಷತ್ ಸದಸ್ಯರ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷರಾದ ರವಿ ನಕಲಗೂಡು ರವರು ಮುಂಬರುವ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರತಿ ಗ್ರಾಮ ಗ್ರಾಮಗಳಿಗೂ ತಲುಪಿಸುವ ಕೆಲಸವನ್ನು ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸಾಹಿತ್ಯ ಆತ್ಮಕವಾದ ಚಟುವಟಿಕೆಗಳನ್ನು ನಡೆಸಲು ಮತ್ತು ಅವರ ಪ್ರತಿಭೆಗಳನ್ನು ಹೊರ ತರುವ ಸಲುವಾಗಿ ವೇದಿಕೆಯನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿರುವುದಲ್ಲದೆ ಯುವ ಬರಹಗಾರರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವುದು ಮತ್ತು ಹಿರಿಯ ಸಾಹಿತಿಗಳನ್ನು ಗುರುತಿಸಿ ಹಿರಿಯ ಸಾಹಿತಿಗಳಿಗಾಗಿ ಒಂದು ಸಮ್ಮೇಳನವನ್ನು ಕಾರ್ಯಕ್ರಮವನ್ನು ರಚಿಸಬೇಕು ಸಾಹಿತ್ಯ ಪರಿಷತ್ತು ಉಳಿಸುವುದರ ಜೊತೆ ಜೊತೆಗೆ ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ಮಾಡಬೇಕಾಗಿದೆ ಈ ಉದ್ದೇಶದಿಂದ ಪ್ರತಿ ಹೋಬಳಿ ಕೇಂದ್ರಗಳಲ್ಲಿಯೂ ಸಹ ಕನ್ನಡ ಶಾಲೆಗಳನ್ನು ಗುರುತಿಸಿ ಅಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸುವುದರ ಜೊತೆಗೆ ಮಕ್ಕಳಲ್ಲಿರುವ ಸಾಹಿತ್ಯ ಆಸಕ್ತಿಯನ್ನು ಹೆಚ್ಚಿಸಲು ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರತಿ ತಾಲೂಕು ಕೇಂದ್ರಗಳಲ್ಲೂ ಕನ್ನಡ ಸಾಹಿತ್ಯ ಪರಿಷತ್ತಿನ ಭವನಗಳ ನಿರ್ಮಾಣ ಅವಕಾಶ ಸಿಕ್ಕಿದ್ದಲ್ಲಿ ಹೋಬಳಿ ಕೇಂದ್ರಗಳಿಗೂ ಸಹ ಸಾಹಿತ್ಯ ಭವನಗಳ ನಿರ್ಮಾಣ ಮಾಡಿಕೊಡುವುದು ಜಿಲ್ಲೆಯ ಕಲಾವಿದರನ್ನು ಸಾಹಿತಿಗಳನ್ನು ಮತ್ತು ಕವಿಗಳನ್ನು ಬರಹಗಾರರನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಅವರಿಗೆ ವಿಶೇಷವಾದ ಸ್ಥಾನಮಾನವನ್ನು ಕಲ್ಪಿಸುವುದರ ಜೊತೆಗೆ ಅವರನ್ನು ಗೌರವಿಸುವ ಕೆಲಸವನ್ನು ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಶಾಲೆಗಳಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸದೆ ಹೋದರೆ ಮಕ್ಕಳಲ್ಲಿ ಸಾಹಿತ್ಯದ ಪ್ರಜ್ಞೆ ಕಡಿಮೆಯಾಗುತ್ತದೆ ಮತ್ತು ಸಾಹಿತ್ಯದ ಬಗ್ಗೆ ದಿನ ಆಸಕ್ತಿ ಕಡಿಮೆಯಾಗುತ್ತದೆ ಆದುದರಿಂದ ಶಾಲಾ ಮಟ್ಟದಿಂದಲೂ ಸಹ ಸಾಹಿತ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಹಾಸನ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅನ್ನು ರಾಜ್ಯದಲ್ಲಿ ಮಾದರಿ ಸಾಹಿತ್ಯ ಪರಿಷತ್ ಮಾಡಲಾಗುವುದು ಹೋಬಳಿ ಕೇಂದ್ರಗಳಲ್ಲಿ ಸಹ ಕನ್ನಡ ಶಾಲೆಗಳ ಉಳಿವಿಗಾಗಿ ದೊಡ್ಡ ಆಂದೋಲನವನ್ನು ಮಾಡಲು ಉದ್ದೇಶಿಸಲಾಗಿದೆ ಹಾಗೂ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಯ ಉಳಿವಿಗಾಗಿ ಹಗಲಿರುಳು ಹೋರಾಟ ಮಾಡುವ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕಾರ್ಯದರ್ಶಿ ಜಾವಗಲ್ ಪ್ರಸನ್ ಕುಮಾರ್ ಅರಸೀಕೆರೆ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣಕುಮಾರ್ ಅರಸೀಕೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಬಾಣವರ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ ರವಿಶಂಕರ್ ಹಾಸನ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ಹೇಮಂತ್ ಕುಮಾರ್ ಪ್ರಾಂಶುಪಾಲ ಮಂಜುನಾಥ್ ಶ್ರೀಮತಿ ಪುಷ್ಪಲತಾ ಸುಧಾಕಲ್ಯಾಣ ಕಾತ್ಯಾಯಿನಿ ವಿಷ್ಣುವರ್ಧನ್ ಕಲ್ಲಳ್ಳಿ ಮಹೇಶ್ ಹಾಗೂ ಮನು ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಹಂಚಿಕೊಳ್ಳಿ: